4:20 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

2024-25ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ: ಅಕ್ಟೋಬರ್ 3ರಿಂದ ದಸರಾ ರಜೆ, ಏಪ್ರಿಲ್ 11, 2025ರಿಂದ ಬೇಸಿಗೆ ರಜೆ

30/05/2024, 17:38

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.ಕಂ

ರಾಜ್ಯ ಶಿಕ್ಷಣ ಇಲಾಖೆ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ ಹಾಗೂ
ಮಾರ್ಗಸೂಚಿ ಪ್ರಕಟಿಸಿದೆ.
ಮಾರ್ಗಸೂಚಿ ಪ್ರಕಾರ ಅಕ್ಟೋಬರ್ 3, 2024ರಿಂದ ದಸರಾ ರಜೆ ಹಾಗೂ ಏಪ್ರಿಲ್ 11, 2025ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಿರುವಂತ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಕುರಿತು ಮಾರ್ಗದರ್ಶಿ ಪ್ರಕಟಿಸಿದೆ.
ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ, ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದಿದೆ.
ಈ ಮಾರ್ಗಸೂಚಿಯಲ್ಲಿ ವಾರ್ಷಿಕ, ತಿಂಗಳುವಾರು ಪಾಠ ಹಂಚಿಕೆ, ಪಠ್ಯೇತರ ಚಟುವಟಿಕೆಗಳು,ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು,ಸಂಭ್ರಮ ಶನಿವಾರ ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಕ್ರಮಗಳ ಬಗ್ಗೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು