9:49 PM Sunday17 - October 2021
ಬ್ರೇಕಿಂಗ್ ನ್ಯೂಸ್
ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು… ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ… ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು… ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು… ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ… ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು;… ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ… ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ… ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ;… ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ,…

ಇತ್ತೀಚಿನ ಸುದ್ದಿ

ಬೋಳೂರು: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ  ವೇದವ್ಯಾಸ ಕಾಮತ್ ಗುದ್ದಲಿಪೂಜೆ

17/04/2021, 06:26

ಮಂಗಳೂರು(reporterkarnataka news) ನಗರದ ಬೋಳೂರು ವಾರ್ಡಿನ ದೇವರಾಯ ಕಾಂಪೌಂಡ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್,  ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಆಡಳಿತ ಬದ್ಧವಾಗಿದೆ. ವಾರ್ಡಿನ ಜನತೆಯ ಬೇಡಿಕೆಯನ್ನು ಪೂರೈಸಲು ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಅವರು ಶ್ರಮಿಸುತಿದ್ದಾರೆ. ಅಭಿವೃದ್ಧಿಯ ನೆಲೆಯಲ್ಲಿ ಸಾರ್ವಜನಿಕರು ಸಹಕಾರ ನೀಡಬೇಂದು ಹೇಳಿದರು.

ದೇವರಾಯ ಕಾಂಪೌಂಡ್ ರಸ್ತೆ ಅಭಿವೃದ್ಧಿಯ ಕುರಿತು ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಮನವಿ ಸಲ್ಲಿಸಿದ್ದರು. ಹಾಗಾಗಿ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ಸ್ಥಾಯಿ ಸಮಿತಿ ಅದ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಕಾರ್ತಿಕ್ ಬಂಗೇರ, ಉಮಾಶಂಕರ್, ದಿನೇಶ್ ಕರ್ಕೇರ, ಗೋಪಾಲ್ ಬಂಗೇರ, ರಾಧಾಕೃಷ್ಣ ಶೇಟ್, ಪುರಂದರ ಶೆಟ್ಟಿ, ರಘು ಸಾಲ್ಯಾನ್, ಗಣೇಶ್ ನಾಡಾರ್, ಪುರುಷೋತ್ತಮ, ಕೀರ್ತಿ ಕರ್ನಲ್ ಗಾರ್ಡನ್, ಗಜಾನನ ಪೈ, ಪ್ರಕಾಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು