ಬೆಂಗಳೂರು(reporterkarnataka news):

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ

ಸೋಂಕು ಭಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಏ.27ರ ರಾತ್ರಿಯಿಂದ ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್‍ಡೌನ್ ಮಾಡಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.

14 ದಿನಗಳ ಲಾಕ್‍ಡೌನ್ ಬಳಿಕವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ಮತ್ತೆ ಅವಲೋಕನ ನಡೆಸಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಲಾಕ್ ಡೌನ್ ಅವಧಿ ಸಂದರ್ಭ ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ಸೇವೆಗಳಿಗೆ ವಿನಾಯಿತಿ ನಿಡಲಾಗಿದೆ. ಕೃಷಿ, ಮೆಡಿಕಲ್ ಸೇರಿ ಅಗತ್ಯ ಸೇವೆಗಳು ಎಂದಿನಂತೆ ಇರುತ್ತದೆ. ಬಹುತೇಕ ಈಗಿರುವ ರೀತಿಯಲ್ಲೇ ಕಪ್ರ್ಯೂ ಇರುತ್ತದೆ. ಯಾವುದೇ ವಾಹನ ಸಂಚಾರ ಇರುವುದಿಲ್ಲ.

Leave a Reply

Your email address will not be published. Required fields are marked *