6:06 AM Thursday29 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಸಾರ್ವಜನಿಕರಿಗೆ ಕೊರೊನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ: ಸಂಸದ ಎಸ್.ಮುನಿಸ್ವಾಮಿ

26/04/2021, 07:21

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

info.reporterkarnataka@gmail.com

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಭೆ – ಸಮಾರಂಭ , ಮದುವೆ ಮೊದಲಾದ ಆಚರಣೆಗಳಿಗಾಗಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ , ಕರೋನಾ ಸೋಂಕಿತರಿಗೆ ಧೈರ್ಯ ತುಂಬಿ ಸಾರ್ವಜನಿಕರಿಗೆ ಕರೋನಾ 2 ನೇ ಅಲೆಯ ಬಗ್ಗೆ ಜಾಗೃತಿ ಮೂಡಿಸಿ ಎಂದು ಮೂಡಿಸಿ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ಹೇಳಿದರು.

ಕೋಲಾರದ ಜಿಲ್ಲಾಧಿಕಾರಿಗಳ ನ್ಯಾಯಾಂಗಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ , ಕೋವಿಡ್ -19 ವೈರಾಣು ಹರಡದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಹೋಬಳಿ ಕೇಂದ್ರ ಸ್ಥಾನಗಳಲ್ಲಿ ಆಂಬುಲೆನ್ಸ್ ಸೇವೆ ಶೀಘ್ರವಾಗಿ ಸಾರ್ವಜನಿಕರಿಗೆ ಸಿಗುವಂತಾಗಬೇಕು . ಎಲ್ಲಾ ಆಂಬುಲೆನ್ಸ್‌ಗಳಲ್ಲಿ ಜಿ.ಪಿ.ಎಸ್ ವ್ಯವಸ್ಥೆ ಹೊಂದಿರಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು . ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು . ಕೊರೊನಾ ರೋಗಿಗಳ ಜೊತೆ ನಾವು ನಡೆದುಕೊಳ್ಳುವ ರೀತಿ ಉತ್ತಮವಾಗಿರಬೇಕು . ಜನರೇ ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಪಡೆಯುವಂತೆ ಅವರನ್ನು ಪ್ರೇರೇಪಿಸಬೇಕು ಎಂದು ತಿಳಿಸಿದರು . ಶ್ರೀನಿವಾಸಪುರ ಶಾಸಕ ಕೆ.ರಮೇಶ್ ಕುಮಾರ್ ಅವರು ಮಾತನಾಡಿ , ಜಿಲ್ಲೆಯಲ್ಲಿ ಬಡವರು , ನಿರ್ಗತಿಕರು ಎಲ್ಲರಿಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಸೂಕ್ರೀತಿಯ ಚಿಕಿತ್ಸೆ ಸಿಗುವಂತಾಗಬೇಕು . ರೆಟ್ಟಸಿವಿಯರ್‌ ಲಸಿಕೆ ಅವಶ್ಯಕವಾಗಿ ಬೇಕಾಗಿರುವ ಕರೋನಾ ಸೋಂಕಿತರಿಗೆ ಸಿಗುವಂತಾಗಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಮಾತನಾಡಿ , ಜಿಲ್ಲೆಯಲ್ಲಿ ಇಂದಿನಿಂದ ಸರ್ಕಾರದ ಮಾನದಂಡದಂತೆ ನೈಟ್ ಕರ್ಪ್ಯೂ ಮತ್ತು ವೀಕೆಂಡ್ ಕರ್ಮ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು . ಅಂತರಾಜ್ಯ ಗಡಿ ಭಾಗದಲ್ಲಿ ಥರ್ಮಲ್ ಸ್ಮಿನಿಂಗ್ ಮಾಡಿಸಲಾಗುವುದು . ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆ , ತಾಲ್ಲೂಕು ಆಸ್ಪತ್ರೆಗಳಲ್ಲಿ ಬೆಡ್‌ಗಳ , ಆಕ್ಸಿಜನ್ ವ್ಯವಸ್ಥೆ , ಐ.ಸಿ.ಯು ಬೆಡ್‌ಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು . ಎ ಸಿಸ್ಟಮ್ಯಾಟಿಕ್ ಇರುವವರಿಗೆ ಕರೋನಾ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡುವುದಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು . ಜಿಲ್ಲೆಯಲ್ಲಿ ಕರೋನಾ ಟೆಸ್ಟಿಂಗ್‌ಗಳ ಸಂಖ್ಯೆ ಹೆಚ್ಚಿಸುವಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು . ಜಿಲ್ಲೆಯಲ್ಲಿ ಇದುವರೆಗೂ 1,70,000 ಜನರು ಲಸಿಕೆ ಪಡೆದಿದ್ದಾರೆ . ಕೇಂದ್ರ ಸರ್ಕಾರದ ಆದೇಶದಂತೆ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆಯನ್ನು ಹಾಕಲ ಜಿಲ್ಲೆಯಲ್ಲಿ ಸೋಂಕಿತರಿಗೆ ಆ್ಯಕ್ಸಿಜನ್ ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ಕೊಡಲಾಗುವುದು . ಜಿಲ್ಲೆಯಲ್ಲಿ ಆಂಬುಲೆನ್ಸ್‌ಗಳು ಚಾಲ್ತಿಯಲ್ಲಿ ಇರಬೇಕು . ಕೊರತೆ ಕಂಡರೆ ಖಾಸಗಿ ವತಿಯಿಂದ ಆಂಬುಲೆನ್ಸ್ ಸೇವೆಯನ್ನು ತೆಗೆದುಕೊಂಡು ಬಳಕೆ ಮಾಡುತ್ತೇವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಿಗೆ 2200 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ . ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡ 50 ರಷ್ಟು ಬೆಡ್‌ಗಳನ್ನು ಮೀಸಲಿಡಲಾಗಿದೆ . ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲೂ 5 ಐಸಿಯು ಬೆಡ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು . ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ಮಾತನಾಡಿ , ಸರ್ಕಾರದ ಮಾರ್ಗಸೂಚಿಯಂತೆ ಈಜುಕೊಳ , ಚಿತ್ರಮಂದಿರ , ಆಟದ ಮೈದಾನ ಕೇಂದ್ರಗಳನ್ನು ಬಂದ್ ಮಾಡಲಾಗುವುದು . ಬಾರ್ , ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶವಿರುತ್ತದೆ . ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯವಾಗಿರುತ್ತದೆ . ಎಲ್ಲಾ ಧಾರ್ಮಿಕ ಸ್ಥಳಗಳು , ಪೂಜಾ , ಪ್ರಾರ್ಥನಾ ಮಂದಿರಗಳಿಗೆ ಭಕ್ತರಿಗೆ ಅವಕಾಶವಿಲ್ಲ . ಆದರೆ , ಪೂಜಾ ಕಾರ್ಯಗಳು ನಡೆಸಲು ಅರ್ಚಕರಿಗೆ ಅವಕಾಶ ಇದೆ . ಸಾರ್ವಜನಿಕರು ಸರ್ಕಾರದ ಕಟ್ಟು ನಿಟ್ಟಿನ ಕ್ರಮಗಳನ್ನು ಪಾಲಿಸಬೇಕು ಎಂದು ತಿಳಿಸಿದರು . ಸಭೆಯಲ್ಲಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ನಾಗೇಶ್ , ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ , ಮಾಲೂರು ವಿಧಾನಸಭಾ ಕ್ಷೇತ್ರದ ಶಾಶಕರಾದ ಕೆ.ವೈ.ನಂಜೇಗೌಡ , ಕೆ.ಜಿ.ಎಫ್  ಶಾಸಕರಾದ ರೂಪಕಲಾ ಶಶಿಧರ್ , ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್ , ಅಪರ ಜಿಲ್ಲಾಧಿಕಾರಿಗಳಾದ ಡಾ. ಸ್ನೇಹಾ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಎಸ್.ಎನ್.ವಿಜಯಕುಮಾರ್ , ಜಿಲ್ಲಾ ಶಸ್ತ್ರಚಿಕಿತ್ಸಕರಾದ ನಾರಾಯಣಸ್ವಾಮಿ , ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.| ಚಾರಿಣಿ , ಉಪ ವಿಭಾಗಾಧಿಕಾರಿಗಳಾದ ಸೋಮಶೇಖರ್ , ಎಲ್ಲಾ ತಾಲ್ಲೂಕು ತಹಶೀಲ್ದಾರ್‌ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು