ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಮಂಗಳವಾರ(ಇಂದು) ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಆದರೆ ವಿಮಾನಗಳು ಹಾರಾಟ ನಡೆಸಲಿವೆ. ರೈಲು ಹಳಿಗಳ ಮೇಲೆ ಓಡಲಿವೆ.

ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ 12ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ಆರ್ಥಿಕ ಚಟುವಟಿಕೆಗಳು ಸ್ತಬ್ದಗೊಳ್ಳಲಿವೆ. ಸಿನಿಮಾ, ಶಾಪಿಂಗ್ ಮಾಲ್, ವಾಣಿಜ್ಯ ಕಟ್ಟಡ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು,  ಯೋಗ ಕೇಂದ್ರ, ಜಿಮ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ರಾಜಕೀಯ, ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿಷೇಧವಿದೆ. ಕೋಚಿಂಗ್ ತರಗತಿ ಬಂದ್ ಆಗಲಿದೆ. ಆನ್ ಲೈನ್ ಕೋಚಿಂಗ್ ಅಬಾಧಿತ. ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ನೀಡಲಾಗಿದೆ. ಆದರೆ ಕುಳಿತು ತಿನ್ನಲು ಅವಕಾಶವಿಲ್ಲ. ಮದ್ಯದಂಗಡಿಗಳಿಗೆ ಬೆಳಗ್ಗೆ 6ರಿಂದ 10ರ ವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಗಾರ್ಮೆಂಟ್ಸ್ ಹೊರತುಪಡಿಸಿ ಇತರ ಉತ್ಪಾದನಾ ವಲಯಗಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ವಿಮಾನ ಹಾರಾಟ ನಡೆಸಲಿವೆ. ರೈಲು ಓಡಲಿವೆ. ಇದರ ಪ್ರಯಾಣಿಕರಿಗೆ ಪ್ರತ್ಯೇಕ ಕ್ಯಾಬ್ ವ್ಯವಸ್ಥೆ ಮಾಡಲಾಗಿದೆ. ಮೆಟ್ರೋ ರೈಲು ಓಡಾಟ ನಿಲ್ಲಿಸಲಿವೆ.

Leave a Reply

Your email address will not be published. Required fields are marked *