1:38 PM Saturday4 - December 2021
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ಗಂಜಿಗುಂಟೆ ಲಂಬಾಣಿ ತಾಂಡದಲ್ಲಿ ಹೆಚ್ಚುತ್ತಿದೆ ಬೀದಿ ನಾಯಿಗಳ ಕಾಟ: ಶ್ವಾನ ಕಡಿತಕ್ಕೆ ಯುವಕ ಬಲಿ ಚಿಕ್ಕಮಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ: ಓರ್ವ ಸಿಬ್ಬಂದಿಗೆ ತೀವ್ರ… ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ: ಬೆಳೆ ಕಳೆದುಕೊಳ್ಳುವ ಆತಂಕದಲ್ಲಿ ಕೃಷಿಕರು  ರಂಗಾಪುರ: ಇದು ಅಂಗನವಾಡಿ ಕಟ್ಟಡ ನಾ? ಅಥವಾ ಸಾರ್ವಜನಿಕ ಶೌಚಾಲಯ ನಾ? ಆರದಿರಲಿ ಬದುಕು ಆರಾಧನ ತಂಡದ ನವೆಂಬರ್ ತಿಂಗಳ ಸಹಾಯ ಧನ ಹಸ್ತಾಂತರ ಹೆತ್ತವರು ಮದುವೆ ಮಾಡಿಸದ ಬೇಸರ: ನೇಣು ಬಿಗಿದು ಪ್ರೇಮಿಗಳು ಆತ್ಮಹತ್ಯೆ  ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್  ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮ ಮದ್ಯದ ಹೊಳೆ: ಇಲ್ಲಿನ ಅಂಗಡಿ, ಹೋಟೆಲ್ ಗಳು ಕೂಡ… ಚಳ್ಳಕೆರೆ: ಶೇಂಗಾ ಸಾಗಾಟ ಮಾಡುತ್ತಿದ್ದ ಟಾಟಾ ಎಸಿಇ ಟೈರ್ ಸಿಡಿದು ಸ್ಥಳದಲ್ಲೇ ಚಾಲಕ ಸಾವು;… ಬಿಜೆಪಿಯಿಂದ ಮತ್ತೆ ಮುಖ್ಯಮಂತ್ರಿ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್

ಇತ್ತೀಚಿನ ಸುದ್ದಿ

ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ಬಿತ್ತು ಬೀಗ ಮುದ್ರೆ.!!

08/05/2021, 15:03

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ(Reporter Karnataka News):ನಿಯಮ ಬಾಹಿರವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 6 ಅಂಗಡಿಗಳ ಮೇಲೆ ಕಂದಾಯ ಹಾಗೂ ಪುರಸಭೆ ಅಧಿಕಾರಿಗಳು ದಾಳಿ ನಡೆಸಿ ಬೀಗ ಮುದ್ರೆ ಹಾಕಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಮಾತನಾಡಿ, ಕೊರೊನಾ ಸಂಕಷ್ಟದಿಂದ ಜನರನ್ನು ಪಾರುಮಾಡಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ. ಜನತಾ ಕಫ್ರ್ಯೂ ನಿಯಮಗಳನ್ನು ಗಾಳಿಗೆ ತೂರಿ ವ್ಯವಹರಿಸುವ ವ್ಯಾಪಾರಿಗಳು ಹಾಗೂ ಸಾರ್ವಜನಿರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಸಮಯ ಪಾಲನೆ ಅತ್ಯಗತ್ಯ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ನಿಯಮ ಬಾಹಿರ. ಅಂಥ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಗುವುದು. ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕೋವಿಡ್ ನಿಯಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಪುರಸಭೆ ಆರೋಗ್ಯ ನಿರೀಕ್ಷಕ ಪೃಥ್ವಿರಾಜ್ ಹಾಗೂ ಪುರಸಭೆ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು