2:24 PM Wednesday23 - June 2021
ಬ್ರೇಕಿಂಗ್ ನ್ಯೂಸ್
ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ? ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ… ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್… ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ.… ವಂಚನೆ ತಪ್ಪಿಸಲು, ನಾಗರಿಕ ಸಮಾಜ ರಕ್ಷಿಸಲು ಆನ್‍ಲೈನ್ ಸ್ಕಿಲ್ ಗೇಮ್ ನಿಯಂತ್ರಿಸಿ: ಸಮೀರ್ ಬಾರ್ಡೆ  ಕೋವಿಡ್ ಗೈಡ್ ಲೈನ್ಸ್ ಉಲ್ಲಂಘಿಸಿ ಕಾರ್ಪೊರೇಟರ್ ಪುತ್ರಿಯ ಮದುವೆ ಸೇರಿದಂತೆ 4 ಜೋಡಿಗಳ… ಬೆಳಗಾವಿಯಲ್ಲಿ ಭಾರಿ ಪ್ರವಾಹ: 10ಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಡಿತ; ನೆರೆಗೆ ಕೊಚ್ಚಿ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲೆಯ ಸರಕಾರಿ ಆಸ್ಪತ್ರೆಯಲ್ಲಿ 100 ಆಕ್ಸಿಜನ್ ಬೆಡ್ ವ್ಯವಸ್ಥೆ: ಸಚಿವ ಲಿಂಬಾವಳಿ

12/05/2021, 20:25

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋವಿಡ್ -19 ಪರೀಕ್ಷೆ ಮಾಡಿಸಿಕೊಂಡವರು ಅವರ ಮೊಬೈಲ್ ನಂಬರ್ , ವಿಳಾಸ ಸರಿಯಾಗಿ ನೀಡಿದರೆ , ನಿಮ್ಮ ಪ್ರಾಣ ರಕ್ಷಣೆಗೆ ಮತ್ತು ಸಮಾಜದ ರಕ್ಷಣೆಗೆ ನೀವು ನೀಡುವ ದೊಡ್ಡ ಕೊಡುಗೆಯಾಗಿದೆ ಎಂದು ಅರಣ್ಯ ,ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಅರವಿಂದ ಲಿಂಬಾವಳಿ ತಿಳಿಸಿದರು . 

ಇಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯ ಕೋವಿಡ್ ವಾರ್ ರೂಮ್ ಮತ್ತು ಜಿಲ್ಲಾ ಎಸ್.ಎನ್.ಆರ್ . ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಕೋವಿಡ್ ವಾರ್ ರೂಮ್‌ನಲ್ಲಿ ಕನಿಷ್ಠ ಶೇ .25 ರಿಂದ 30 ರಷ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರನ್ನು ನಾವು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ . 

ಏಕೆಂದರೆ ಅವರ ಮೊಬೈಲ್ ನಂಬರ್ ಸ್ವಿಚ್ ಆಫ್ ಮಾಡಿಕೊಂಡಿರುತ್ತಾರೆ . ಪರೀಕ್ಷೆ ಮಾಡಿಸಿಕೊಂಡವರ ಫಲಿತಾಂಶವನ್ನು ತಿಳಿದುಕೊಳ್ಳಲು ವಾರ್ ರೂಂ ಕಡೆಯಿಂದ ಕರೆ ಮಾಡಿದಾಗ ಪ್ರತಿಕ್ರಿಯೆ ನೀಡಿ ಸರಿಯಾದ ವಿಳಾಸ , ಮೊಬೈಲ್ ನಂಬರ್ ಮಾಹಿತಿಯನ್ನು ನೀಡಬೇಕು ಎಂದು ಹೇಳಿದರು . ವೈದ್ಯರು , ಆರೋಗ್ಯ ಸಿಬ್ಬಂದಿ , ಆಶಾ ಕಾರ್ಯಕರ್ತೆಯರು , ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಮಿತಿಯವರು ಮನೆ ಮನೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ನಿಮ್ಮ ರಕ್ಷಣೆ ಮಾಡುತ್ತಾರೆ , ಅವರಿಗೆ ನಿಮ್ಮ ಸಹಕಾರ ಬೇಕು ಎಂದು ಹೇಳಿದರು . ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 100 ಆಕ್ಸಿಜನ್ ಬೆಡ್‌ಗಳ ವ್ಯವಸ್ಥೆ ಮಾಡಲಾಗುವುದು . ಜಿಲ್ಲಾ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆಯನ್ನು 2-3 ದಿನಗಳಲ್ಲಿ ಸರಿ ಮಾಡಲಾಗುವುದು . 

ಒಂದುವಾರದಲ್ಲಿ ಎಸ್ಎನ್ಆರ್  ಆಸ್ಪತ್ರೆ ಮತ್ತು ಕೆ.ಜಿ.ಎಫ್ ಆಸ್ಪತ್ರೆಯಲ್ಲಿ ತಲಾ 50 ಆಕ್ಸಿಜನ್‌ಬೆಡ್‌ಗಳನ್ನು ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು . ಜಿಲ್ಲಾ ಆಸ್ಪತ್ರೆಯಲ್ಲಿ ಇರುವ 40 ವೆಂಟಿಲೇಟರ್‌ಗಳು ಮತ್ತು ಐ.ಸಿ.ಯು.ಗಳು ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ . ಪ್ರತಿ ದಿನ ಜಿಲ್ಲಾಡಳಿತಕ್ಕೆ ಒಳಪಡುವ ಆಸ್ಪತ್ರೆಗಳಲ್ಲಿನ ಬೆಡ್‌ಗಳ ಸೌಲಭ್ಯದ ಬಗ್ಗೆ ಜಿಲ್ಲಾಧಿಕಾರಿಗಳು ಸಂಜೆ 6 ಗಂಟೆಗೆ ಬುಲೆಟಿನ್ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ . ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್‌ಬೆಡ್ ಹೆಚ್ಚು ಮಾಡಲಾಗುತ್ತದೆ ಮತ್ತು ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುತ್ತದೆ . ಇವತ್ತಿನ ಅವಶ್ಯಕತೆಗೆ ತಕ್ಕಷ್ಟು ಬೆಡ್‌ಗಳ ಸೌಲಭ್ಯ ಇದೆ ಎಂದು ತಿಳಿಸಿದರು . 5 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದವರಿಗೆ ಮನೆ ಮನೆಗೂ ಮೆಡಿಕಲ್ ಕಿಟ್ ಕೊಡುತಿದ್ದೇವೆ . ಯಾರಿಗಾದರೂ ತಲುಪದಿದ್ದಲ್ಲಿ ತಾಲ್ಲೂಕು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿದರೆ ಪಂಚಾಯಿತಿ ಟಾಸ್ಕ್ ಫೋರ್ಸ್ ರವರು ತಂದು ಕೊಡುತ್ತಾರೆ . 

ವ್ಯಾಕ್ಸಿನ್ 45 ವರ್ಷ ಮೇಲ್ಪಟ್ಟವರಿಗೆ ಮತ್ತು ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು . ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣ ಹೆದರದೆ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆಯಂತೆ ನಡೆದುಕೊಳ್ಳಬೇಕು ವೈದ್ಯರು , ಆರೋಗ್ಯ ಸಿಬ್ಬಂದಿ , ಆಶಾ ಕಾರ್ಯಕರ್ತೆಯರು ಪರಿಶೀಲನೆ ನಡೆಸಿ ಕೋವಿಡ್ ಲಕ್ಷಣಗಳು ಕಂಡು ಬಂದ ತಕ್ಷಣ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗುವುದು ಎಂದು ತಿಳಿಸಿದರು.

ನಂತರ ಮಾಲೂರಿನ ಸಾರ್ವಜನಿಕ ಆಸ್ಪತ್ರೆ ಮತ್ತು ಕೊರೋನಾ ವಾರ್ ರೂಮ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಈ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ , ಮಾಲೂರು ಶಾಸಕರಾದ ನಂಜೇಗೌಡ , ಕೋಲಾರ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ , ತಶೀಲ್ದಾರ್‌ರಾದ ಶೋಭಿತಾ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ ಕುಮಾರ್ ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಾಕರಾದ ಡಾ.ಜಗದೀಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು