3:58 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಚಂಡಮಾರುತ ಎಫೆಕ್ಟ್: ಮಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ; ರೆಡ್ ಅಲರ್ಟ್ ಘೋಷಣೆ

15/05/2021, 10:45

ಮಂಗಳೂರು(reporterkarnataka news): ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರಗಳಿಂದ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯ ಆರ್ಭಟ ಜೋರಾಗಿದ್ದು, ಮೇ 16ರವರೆಗೆ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಇನ್ನೂ 3 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಇದಕ್ಕೆ ತೌಕ್ತೆ ಚಂಡಮಾರುತ ಎಂದು ಹೆಸರಿಡಲಾಗಿದೆ. ಕರ್ನಾಟಕ, ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಮೇ 15ರಂದು ಮಹಾರಾಷ್ಟ್ರ ಮತ್ತು ಗೋವಾದಲ್ಲಿಯೂ ಚಂಡಮಾರುತ ಅಬ್ಬರ ಹೆಚ್ಚಾಗಲಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಅನೇಕ ಜಿಲ್ಲೆಗಳಲ್ಲಿ ಇನ್ನು 3 ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ. 

15ರಂದು ಚಂಡಮಾರುತದ ಪರಿಣಾಮವಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ನೋಟಿಸ್ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಉತ್ತರ ಕನ್ನಡ, ಚಿತ್ರದುರ್ಗದಲ್ಲಿ ಇಂದು ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯವಾದ ಕೇರಳ, ಅಸ್ಸಾಂ, ಸಿಕ್ಕಿಂ, ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಇಂದು ಮಳೆ ಹೆಚ್ಚಾಗಲಿದೆ. ಜೂನ್ 1ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 15ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರಿನಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮೇ 16ರಂದು ಚಂಡಮಾರುತ ಉಂಟಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು