8:34 PM Thursday25 - April 2024
ಬ್ರೇಕಿಂಗ್ ನ್ಯೂಸ್
ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ

ಇತ್ತೀಚಿನ ಸುದ್ದಿ

ವದಂತಿಗಳಿಗೆ ಕಿವಿಗೊಡಬೇಡಿ, ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ: ಶಾಸಕ ವೇದವ್ಯಾಸ ಕಾಮತ್

19/05/2021, 19:07

ಮಂಗಳೂರು(reporterkarnataka news):

ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ.‌ ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಹೇಳಿದ್ದಾರೆ. 

ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ 84 ದಿನಗಳ ನಂತರ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡುವ ಒಂದು ದಿನ ಮೊದಲು ಎಸ್.ಎಂ.ಎಸ್ ಅಥವಾ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಗಾಬರಿಪಡಬೇಕಿಲ್ಲ ಎಂದು ಶಾಸಕರು ಹೇಳಿದ್ದಾರೆ. 

ಪ್ರಾರಂಭದ ದಿನಗಳಲ್ಲಿ ಲಸಿಕೆಯ ಕುರಿತು ಬಿಜೆಪಿಯ ವ್ಯಾಕ್ಸಿನ್ ಎಂದು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಿದ ಕಾಂಗ್ರೆಸ್ ಮುಖಂಡರು ಇಂದು ಲಸಿಕೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಜನರಲ್ಲಿ ಭೀತಿ ಹುಟ್ಟಿಸಿ ಜನರು ಲಸಿಕೆ ಪಡೆಯಲು ಬಾರದಂತೆ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು