12:01 PM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ‘ಯಾಸ್ ‘ ಚಂಡಮಾರುತದ ಭೀತಿ: ಒಡಿಸ್ಸಾ, ಪ.ಬಂ. ಅಪ್ಪಳಿಸುವ ಸಾಧ್ಯತೆ

23/05/2021, 08:51

ನವದೆಹಲಿ(reporterkarnataka news):

ಪೂರ್ವ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಶನಿವಾರ ನಿಮ್ನ ಒತ್ತಡದ ಪ್ರದೇಶ’ ರೂಪುಗೊಂಡಿದ್ದು, ಮೇ 24 ರೊಳಗೆ ‘ಯಾಸ್‌’ ಚಂಡಮಾರುತದ ಬೀಸುವಿಕೆಯು ತೀವ್ರವಾಗಲಿದೆ. ಹಾಗೆ ಮೇ 26ಕ್ಕೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಳ ತೀರ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, “ಅತ್ಯಂತ ತೀವ್ರವಾದ ಚಂಡಮಾರುತ ಬೀಸಲಿದ್ದು ಇದು ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾಕ್ಕೆ ತಲುಪಿ ಬಾಂಗ್ಲಾದೇಶದ ತೀರಕ್ಕೆ ಮೇ 26 ರ ಸಂಜೆ ಸಾಗಲಿದೆ” ಎಂದು ತಿಳಿಸಿದೆ.

ಅತ್ಯಂತ ತೀವ್ರವಾಗಿರುವ ಈ ಚಂಡಮಾರುತವು ಮತ್ತಷ್ಟು ತೀವ್ರವಾಗಲಿದ್ದು, ಭಾರತದ ಉತ್ತರ-ವಾಯುವ್ಯ ದಿಕ್ಕಿಗೆ ತೆರಳಿ ಪಶ್ಚಿಮ ಬಂಗಾಳ, ಪಕ್ಕದ ಉತ್ತರ ಒಡಿಶಾವನ್ನು ಸಾಗಿ ಬಾಂಗ್ಲಾದೇಶದ ಕರಾವಳಿಯನ್ನು 26 ನೇ ಸಂಜೆ ತಲುಪಲಿದೆ” ಎಂದು ಮಾಹಿತಿ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು