12:28 AM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು