12:35 AM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ  ‘ಸಿ’ ಗ್ರೇಡ್ ದೇಗುಲಗಳ 150 ಅರ್ಚಕರುಗಳಿಗೆ  ಆಹಾರದ ಕಿಟ್ ವಿತರಣೆ

29/05/2021, 17:06

ಪುತ್ತೂರು(reporterkarnataka news):

ಎ ಗ್ರೇಡ್ ದೇವಸ್ಥಾನವಾದ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಪುತ್ತೂರು ತಾಲೂಕಿನ ‘ಸಿ’ ಗ್ರೇಡ್ ದೇವಸ್ಥಾನಗಳ 150 ಅರ್ಚಕರುಗಳಿಗೆ 1500 ರೂ.ಮೌಲ್ಯದ ಆಹಾರದ ಕಿಟ್ ಗಳನ್ನು ಜಿಲ್ಲೆಯಲ್ಲೆ ಪ್ರಥಮ ಬಾರಿಗೆ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಅರ್ಚಕರಿಗೆ ಆಹಾರದ ಕಿಟ್ ವಿತರಣೆ ಜೊತೆಗೆ ಪ್ರತಿ ದೇವಸ್ಥಾನಕ್ಕೆ ತಲಾ ಎರಡರಂತೆ ಬಿಲ್ವಪತ್ರೆ ವಿತರಣೆಯನ್ನು ಪುತ್ತೂರು ಸೇವಾ ಭಾರತಿ ವತಿಯಿಂದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಸದಸ್ಯರಾದ ರಾಮಚಂದ್ರ ಕಾಮತ್,  ರಾಮ್ ದಾಸ್ ಗೌಡ,ವೀಣಾ ಬಿ.ಕೆ , ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಮುರಳಿಕೃಷ್ಣ ಹಸಂತಡ್ಕ, ನಿತ್ಯ‌ಕರಸೇವಕ ಕಿರಣ್ ಶಂಕರ್‌ಮಲ್ಯ ಮತ್ತು ಸಿ ಗ್ರೇಡ್ ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು