12:44 AM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

ಕೊರೊನಾದಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ: ಡಿ. ನಾಗವೇಣಿ ಎಸ್. ಪಾಟೀಲ್ ಮನವಿ

03/06/2021, 06:52

ಸಿಂಧನೂರು(reporterkarnataka news): ಕೊರೊನಾ ಎರಡನೆ ಅಲೆ ಭೀಕರವಾಗಿದ್ದು ಇದರಿಂದ ಪ್ರತಿಯೊಬ್ಬರೂ  ರಕ್ಷಿಸಿಕೊಳ್ಳಬೇಕೆಂದು ಶ್ರೀ ದೀಕ್ಷಿತ್  ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕರಾದ ಡಿ. ನಾಗವೇಣಿ ಎಸ್. ಪಾಟೀಲ್ ತಿಳಿಸಿದರು.

ಅವರು ಸಿಂಧನೂರು ಪಟ್ಟಣದ ಪಿಡಬ್ಲ್ಯೂ ಡಿ ಕ್ಯಾಂಪ್ ಸಮೀಪವಿರುವ ಬುಡಕಟ್ಟು ಜನಾಂಗ ಹಾಗೂ ಕೊರೊನಾದಿಂದ  ಚೇತರಿಸಿಕೊಂಡು ಮನೆಯಲ್ಲಿದ್ದವರಿಗೆ ಕಿಟ್ ವಿತರಿಸಿ ಮಾತನಾಡಿದರು.

ಕೊರೊನಾ ಸೋಂಕನ್ನು ತಡೆಗಟ್ಟಲು ಮಾಸ್ಕ್ , ಸ್ಯಾನಿಟೈಸರ್ ಉಪಯೋಗಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಡಿ ನಾಗವೇಣಿ ಹೇಳಿದರು.

ಕೊರೊನಾದಿಂದ ಮಕ್ಕಳ ರಕ್ಷಣೆ ಬಹಳ ಮುಖ್ಯವಾಗಿದೆ. ಇದರಿಂದ ಪ್ರತಿಯೊಬ್ಬರೂ ನೀರನ್ನು ಕಾಯಿಸಿ ಕುಡಿಯುವುದರ ಜೊತೆಗೆ ಸ್ವಚ್ಛತೆಯನ್ನು ಕಾಪಾಡಿಕೊಂಡು ಹೋಗಬೇಕೆಂದು  ನಾಗವೇಣಿ ಎಸ್ ಪಾಟೀಲ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸುಮಾ ಹೂಗಾರ್, ವಿಜಯಲಕ್ಷ್ಮಿ ಹೂಗಾರ್,ರಜೆನಾ ಸಹನಾ, ಇನ್ನು ಇತರ ಮಹಿಳಾ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು