5:14 AM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ ಮಾನವೀಯ ಮುಖ: ಲಾಕ್ ಡೌನ್ ನಲ್ಲಿ ಬಡ ಕುಟುಂಬಗಳಿಗೆ ಆಸರೆಯಾಗಿ ನಿಂತ ಎಸ್ಪಿ ವೇದಮೂರ್ತಿ

03/06/2021, 06:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕೋವಿಡ್ ಸಮಯದಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರ ಕಿಟ್ ನೀಡುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಖಾಕಿ ಹಿಂದಿನ ತಾಯಿ ಹೃದಯವನ್ನು ತೆರೆದಿಟ್ಟಿದ್ದಾರೆ.

ರಾಯಚೂರು ಜಿಲ್ಲೆಯ ಪೊಲೀಸ್ ವರಿಷ್ಠ ಸಿ.ಬಿ. ವೇದಮೂರ್ತಿ ಅವರು ಯಾದಗಿರಿ ಜಿಲ್ಲಾ ಎಸ್ ಪಿ ಆಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ರಬ್ಬರ್ ಕೆಲಸ ಮಾಡುತ್ತಿರುವ ಬಡ ಕುಟುಂಬದ ಬುಡ ಜಂಗಮರಿಗೆ ವೇದಮೂರ್ತಿ ಅವರು, ಕೋವಿಡ್ ಸಮಯದಲ್ಲಿ ಯಾರು ಹೊರಗಡೆ ಬರಬೇಡಿ ಎಂದು ಅವರ ಜೀವನಕ್ಕೆ ಆಹಾರ ಕಿಟ್ ನೀಡುವುದರ ಮೂಲಕ ಮಾನವೀಯತೆ ತೋರಿದ್ದಾರೆ. ಇದು ರಾಜ್ಯಕ್ಕೆ ಮಾದರಿ ಎಂದರೆ ತಪ್ಪಾಗಲಿಕ್ಕಿಲ್ಲ. ಅವರು ರಾಯಚೂರು ಜಿಲ್ಲೆಯಲ್ಲೂ ಒಳ್ಳೆಯ ಹೆಸರು ಸಂಪಾದಿಸಿದ್ದಾರೆ.  

ಕೋವಿಡ್ ಸಮಯದ ಸಂಕಷ್ಟದಲ್ಲಿ ಪೊಲೀಸ್ ಅಧಿಕಾರಿ ಆಸರೆಯಾಗಿದ್ದು, ಪುಣ್ಯದ ಕೆಲಸವನ್ನು ಜಿಲ್ಲಾ ಎಸ್ಪಿ ಸಿ ಬಿ ವೇದಮೂರ್ತಿ ಮಾಡಿದ್ದಾರೆ ಎಂದು ಬುಡ ಜಂಗಮದ ಮುಖಂಡರು ಕೊಂಡಾಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು