1:17 AM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ:  ಶಾಸಕ ವೇದವ್ಯಾಸ ಕಾಮತ್ ಸಂತಸ

03/06/2021, 06:33

ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. 

ಬಳಿಕ ಮಾತನಾಡಿದ ‌ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರ ವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.  ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪ್ರಗತಿಯಲ್ಲಿದೆ. ಕಾರ್ಮಿಕರ ಕೊರತೆಯಿದ್ದರೂ ಕೂಡ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ಆದಷ್ಟು ಬೇಗನೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಳೀಯ ಮನಪಾ ಸದಸ್ಯರೂ ಪಾಲಿಕೆ ಲೆಕ್ಕಪತ್ರ ಸ್ಥಾಯಿ  ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಶಾರದಾ ವಿದ್ಯಾಲಯದ ಪ್ರಮುಖರಾದ ಎಂ. ಬಿ ಪುರಾಣಿಕ್, ಹಾಗೂ ಸಂಬಂಧಪಟ್ಟ ಅಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು