7:17 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ  14.80 ಲಕ್ಷ ರೂ. ಮೌಲ್ಯದ ವೈದ್ಯಕೀಯ ಕಿಟ್ ಹಸ್ತಾಂತರ

04/06/2021, 07:47

ಮಂಗಳೂರು (reporterkarnataka news): ಬ್ಯಾಂಕ್ ಆಫ್ ಬರೋಡಾದ ವತಿಯಿಂದ ಜಿಲ್ಲಾಡಳಿತಕ್ಕೆ ಕೊರೊನಾ ಸೋಂಕು ಚಿಕಿತ್ಸೆಗೆ ಅಗತ್ಯವಿರುವ ಗ್ಲುಕೋಮೀಟರ್, ಬಿಪಿ ಮೋನಿಟರ್, ಥರ್ಮೋಸ್ಕ್ಯಾನರ್, ಮಾಸ್ಕ್, ಹಾಗೂ ಸ್ಯಾನಿಟೈಸರ್ ಗಳನ್ನೊಳಗೊಂಡ ಒಟ್ಟು 14.80 ಲಕ್ಷಗಳ ಮೌಲ್ಯದ ವೈದ್ಯಕೀಯ ಕಿಟ್‍ಗಳನ್ನು ಬ್ಯಾಂಕ್ ಆಫ್ ಬರೋಡದ ಪ್ರಧಾನ ವ್ಯವಸ್ಥಾಪಕರು ಮತ್ತು ವಲಯ ಮುಖ್ಯಸ್ಥರಾದ ಗಾಯತ್ರಿ ಆರ್. ಅವರು

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಸ್ತಾಂತರಿಸಿದರು. 
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್,  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಉಪ ಪ್ರಧಾನ ವ್ಯವಸ್ಥಾಪಕ ಮತ್ತು ವಲಯ ಮುಖ್ಯಸ್ಥ ಗೋಪಾಲಕೃಷ್ಣ ಆರ್., ಮಂಗಳೂರು ಕ್ಷೇತ್ರೀಯ ಪ್ರಮುಖ ಕಿರಣ್ ರೆಡ್ಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕೊರೊನಾ ನಿಯಂತ್ರಣಕ್ಕೆ  ಹಾಗೂ ಮತ್ತಿತರ ಸೌಲಭ್ಯಗಳನ್ನು ನೀಡಿರುವ ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸರಕಾರಿ ಸ್ವಾಮ್ಯದ, ಅರೆ ಸರ್ಕಾರಿ ಹಾಗೂ ಇನ್ನಿತರ ಖಾಸಗಿ ಸಂಸ್ಥೆಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು. 

ಜಿಲ್ಲಾಡಳಿತವು ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯಿಂದಲೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದೇ ರೀತಿ ಗ್ರಾಮ ಪಂಚಾಯತಿಯ ಟಾಸ್ಕ್ ಪೋರ್ಸ್ ಸಮಿತಿಗಳು ಸಹಾ ಕೊರೋನಾ ನಿಯಂತ್ರಣಕ್ಕೆ ಮುಂದಾಗಿದೆ ಎಂದರು.
ಬ್ಯಾಂಕ್ ಆಫ್ ಬರೋಡಾದ ವತಿಯಿಂದ ನೀಡಲಾಗಿರುವ ವೈದ್ಯಕೀಯ ಕಿಟ್‍ಗಳಲ್ಲಿ ಗ್ಲುಕೋಮೀಟರ್, ಬಿಪಿ ಮೋನಿಟರ್, ಥರ್ಮೋಸ್ಕ್ಯಾನರ್‍ಗಳನ್ನು ಎ.ಎನ್.ಎಂ ನರ್ಸ್‍ಗಳಿಗೆ ವಿತರಿಸಲಾಗುವುದು. ಅವರು ಮನೆ-ಮನೆಗೆ ಭೇಟಿ ನೀಡಿ ಕೊರೋನಾ ರೋಗಿಗಳನ್ನು ತಪಾಸನೆ ಮಾಡುವುದರೊಂದಿಗೆ ವರದಿ ನೀಡುವುದಾಗಿ ತಿಳಿಸಿದರು. ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು ಸಂಬಂಧಪಟ್ಟ ಪಂಚಾಯತಿಗಳಲ್ಲಿ ನೀಡಲಾಗುವುದಾಗಿ ತಿಳಿಸಿದರು. ಇದರಿಂದ ಆಸ್ಪತ್ರೆಗಳಲ್ಲಿ ಹಾಗೂ ಹೋಮ್ ಕ್ವಾರಂಟೈನ್‍ಗಳಲ್ಲಿ ಇರುವಂತಹಾ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುವುದು ಎಂದರು.
ಜಿಲ್ಲೆಯಲ್ಲಿ 8 ಮೆಡಿಕಲ್ ಕಾಲೇಜುಗಳಿಗೆ 15 ಕ್ಕೂ ಹೆಚ್ಚು ಜಿಲ್ಲೆಗಳಿಂದ ಕೊರೋನಾ ಸೋಂಕಿತರು ಅಲ್ಲದೇ ಇತರ ರೋಗಿಗಳು ಚಿಕಿತ್ಸೆಗೆಂದು ಬರುತ್ತಿದ್ದು, ಉತ್ತಮ ಚಿಕಿತ್ಸೆ ನೀಡುವುದರೊಂದಿಗೆ ಸ್ಪಂದಿಸುತ್ತಿದೆ. ಅದರೊಂದಿಗೆ ಜಿಲ್ಲಾಡಳಿತವು ಸವಾಲುಗಳನ್ನು ಎದುರಿಸುವ ಸಂದರ್ಭದಲ್ಲಿಯೂ ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡುತ್ತಿದೆ ಎಂದರು. 
ಕೊರೊನಾ ನಿಯಂತ್ರಣವಾಗಿರುವಂತಹ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯೂ ಒಂದಾಗಿರುವುದು ಜಿಲ್ಲಾಡಳಿತಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದ ಅವರು, ಜಿಲ್ಲೆಯ 225 ಗ್ರಾಮ ಪಂಚಾಯತ್‍ಗಳಲ್ಲಿಯೂ ಕಾರ್ಯಪಡೆಯನ್ನು ರಚನೆ ಮಾಡಿ ಮನೆಮನೆಗೆ ಭೇಟಿ ನೀಡಿ ರೋಗಿಗಳ ಯೋಗಕ್ಷೇಮ ವಿಚಾರಣೆ ಮಾಡುವುದರೊಂದಿಗೆ ವೈದ್ಯಾಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಕಾರ್ಯಕ್ರಮದಲ್ಲಿ ಎಲ್ಲಾ ಮೆಡಿಕಲ್ ಕಾಲೇಜುಗಳಿಂದ ವೈದ್ಯರನ್ನು ಒಳಗೊಂಡ ತಂಡವು ಸಾರ್ವಜನಿಕರನ್ನು ಹಾಗೂ ಕೊರೋನಾ ಪೀಡಿತರನ್ನು ಬೇಟಿ ಮಾಡಿ ಸ್ವಾಬ್ ಟೆಸ್ಟ್ ಮಾಡಲು ಬ್ಯಾಂಕ್ ಆಫ್ ಬರೋಡಾದ ವತಿಯಿಂದ ನೀಡಲಾಗಿರುವ ವೈದ್ಯಕೀಯ ಕಿಟ್‍ಗಳು ತುಂಬಾ ಅನುಕೂಲವಾಗಿದೆ. ಇದರಿಂದ ಹೆಚ್ಚಿನ ಜನಸಾಮಾನ್ಯರಿಗೆ ಸದುಪಯೋಗವಾಗಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು