12:16 AM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

Unlock Update : ಜೂ.7ರಿಂದ ದೆಹಲಿಯಲ್ಲಿ ಮೆಟ್ರೊ ಆರಂಭ, ಓಪನ್ ಆಗಲಿದೆ ಮಾರುಕಟ್ಟೆ ಹಾಗೂ ಮಾಲ್‌ಗಳು :

05/06/2021, 21:34

ದೆಹಲಿ (Reporter Karnataka News)

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.
ಜೂ.7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಕಾರ್ಯಾಚರಿಸಲಿವೆ ಅಲ್ಲದೇ ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಕೂಡಾ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಬಿಡದೆ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಮೂಲಕ ಇತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಸಮ-ಬೆಸ ಆಧಾರದಲ್ಲಿ ಮಾರುಕಟ್ಟೆ ಮತ್ತು ಮಾಲ್ಸ್ ಗಳನ್ನು ತೆರೆಯಲು ಅನುವು ಮಾಡಿಕೊಡಲಾಗುವುದು ಎಂದು ದೆಹಲಿ ಸಿಎಂ ತಿಳಿಸಿದ್ದಾರೆ. ಖಾಸಗಿ ಕಚೇರಿಗಳಲ್ಲಿಯೂ ಶೇ.50ರಷ್ಟು ಉದ್ಯೋಗಿಗಳೊಂದಿಗೆ ಕಾರ್ಯನಿರ್ವನಿಸಲು ಅವಕಾಶ ನೀಡಲಾಗುವುದು ಎಂದು ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು