5:09 PM Thursday24 - June 2021
ಬ್ರೇಕಿಂಗ್ ನ್ಯೂಸ್
ಚಲನಚಿತ್ರ, ಕಿರುತೆರೆ ರಂಗದ ಕಲಾವಿದರಿಗೆ, ಕಾರ್ಮಿಕರಿಗೆ 3 ಸಾವಿರ ರೂ. ಆರ್ಥಿಕ ನೆರವು  ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ… ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ… ಮುಂಬರುವ ವಿಧಾನಸಭೆ ಚುನಾವಣೆ:ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಡಿಕೆಶಿ ಚಿಂತನೆ; ಜಿಲ್ಲಾಧ್ಯಕ್ಷರುಗಳ ಬದಲಾವಣೆ? ಬಸವಣ್ಣನ ನಾಡು ವಿಜಯಪುರದಲ್ಲಿ ಮರ್ಯಾದಾ ಹತ್ಯೆ: ತಂದೆಯಿಂದಲೇ ಅಪ್ರಾಪ್ತ ಪುತ್ರಿ ಮತ್ತು ಆಕೆಯ… ಸೆಮಿ ಲಾಕ್ ಡೌನ್: ಮಂಗಳೂರಿನಲ್ಲಿ ಹೆಚ್ಚಿದ ವಾಹನ ದಟ್ಟಣೆ; ಸ್ವತಃ ಫೀಲ್ಡಿಗಿಳಿದ ಪೊಲೀಸ್… ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು? ಸುಕ್ಷೇತ್ರ ಮೈಲಾರ ಲಿಂಗೇಶ್ವರದಲ್ಲಿ ಭವಿಷ್ಯ ಹೇಳುವ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇನ್ನಿಲ್ಲ ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ. ಬ್ರಹ್ಮಾವರ ಸಮೀಪದ ಕ್ಯಾಶ್ಯು ಇಂಡಸ್ಟ್ರೀಸ್ ಗೆ ಗುಜರಾತ್ ವ್ಯಾಪಾರಿಯಿಂದ 40 ಲಕ್ಷ ರೂ.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜೂನ್ 14ಕ್ಕೆ ಮುನ್ನವೇ ಲಾಕ್ ಡೌನ್ ತೆರವು?: ನಾಳೆ ಕೋವಿಡ್ ಟಾಸ್ಕ್ ಫೋರ್ಸ್ ಸಭೆ

06/06/2021, 21:44

ರಾಜೀವಿಸುತ ಬೆಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆಯಾಗಿದ್ದರೂ ಅದಕ್ಕೆ ಮುನ್ನವೇ ಅನ್ ಲಾಕ್ ಆಗುವ ಸಾಧ್ಯತೆಯಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.

ಹಂತ ಹಂತವಾಗಿ ರಾಜ್ಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಮತ್ತೆ ಜೀವ ನೀಡಲು ಸಿದ್ದತೆ ನಡೆದಿದೆ. ಇದಕ್ಕೆ ಕಾರಣ ರಾಜ್ಯದಲ್ಲಿ ಇಳಿಮುಖವಾಗುತ್ತಿರುವ ಕೊರೊನಾ ಪ್ರಕರಣ. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ರೇಟ್ ಶೇ.10ಕ್ಕಿಂತ ಕೆಳಗಿಳಿದಿದೆ. ಈ ನಿಟ್ಟಿನಲ್ಲಿ, 4-5 ದಿನಗಳಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಕಡಿಮೆ ಸೋಂಕಿರುವ ಕಡೆ ಅನ್‍ಲಾಕ್ ಮಾಡುವ ಬಗ್ಗೆ ಸಮಾಲೋಚನೆ ನಡೆಸಲು ಯಡಿಯೂರಪ್ಪ ತಯಾರಿ ನಡೆಸಿದ್ದಾರೆ. ದೆಹಲಿ ಮತ್ತು ನೆರೆಯ ಮಹಾರಾಷ್ಟ್ರಗಳು ನಿಧಾನವಾಗಿ ಅನ್‍ಲಾಕ್ ಆಗುತ್ತಿರುವುದು ಮುಖ್ಯಮಂತ್ರಿಯವರಿಗೆ ಧೈರ್ಯ ನೀಡಿದೆ.

ಅನ್‍ಲಾಕ್ ಸಂಬಂಧ ನಾಳೆ(ಜೂನ್ 7) ಮಧ್ಯಾಹ್ನ 2:30ಕ್ಕೆ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಯಲಿದೆ. ಜಿಲ್ಲಾವಾರು ಹಂತ ಹಂತವಾಗಿ ಅನ್‍ಲಾಕ್ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ನಂತರ ಸಿಎಂ ಸಂಪುಟ ಸಭೆ ನಡೆಸಿ ಮಹತ್ದದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ‘ರಿಪೋರ್ಟರ್ ಕರ್ನಾಟಕ’ಕ್ಕೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು