7:22 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ… ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್…

ಇತ್ತೀಚಿನ ಸುದ್ದಿ

ವರ್ಗಾವಣೆ ಆದೇಶ ಬೆನ್ನಲ್ಲೇ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಭೇಟಿ: ಅರ್ಧ ತಾಸಿಗೂ ಹೆಚ್ಚು ಕಾಲ ಚರ್ಚೆ

06/06/2021, 13:27

ಬೆಂಗಳೂರು(reporterkarnataka news) : ವರ್ಗಾವಣೆ ಆದೇಶದ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ‌‌‌ಯಾಗಿ ಮಾತನಾಡಿದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ‌ ಮಾಡಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು‌ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ನಡುವಿನ ಸಂಘರ್ಷ ಇತ್ತೀಚೆಗೆ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಸರಕಾರ

ಇಬ್ಬರೂ ಅಧಿಕಾರಿಗಳ ವರ್ಗಾವಣೆಗೆ ಆದೇಶ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ಅವರು ಸಿಎಂ ಭೇಟಿ‌ ಮಾಡಿದ್ದಾರೆ.

ರೋಹಿಣಿ ಸಿಂಧೂರಿ‌ ಅವರು ಸಿಎಂ ಜತೆ ಸುಮಾರು ಅರ್ಧ ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಮ್ಮದೇನು ತಪ್ಪಿಲ್ಲ,  

ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಸಿಎಂ  ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು