11:14 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಮಂಗಳೂರು: ತ್ಯಾಜ್ಯ ವಿಂಗಡಿಸದ ಅಪಾರ್ಟ್ ಮೆಂಟಿಗೆ ಪಾಲಿಕೆಯಿಂದ ಬರೋಬ್ಬರಿ 53 ಸಾವಿರ ದಂಡ !

07/06/2021, 14:59

ಮಂಗಳೂರು(reporterkarnataka news): ಮಂಗಳೂರು ಮಹಾನಗರಪಾಲಿಕೆಯ ತ್ಯಾಜ್ಯ ವಿಂಗಡಣೆ ಆದೇಶ ಉಲ್ಲಂಘಿದ ಆರೋಪದ ಮೇಲೆ ನಗರದ ವಸತಿ ಸಂಕೀರ್ಣವೊಂದಕ್ಕೆ ಬರೋಬ್ಬರಿ 53 ಸಾವಿರ ರೂ. ದಂಡ ವಿಧಿಸಲಾಗಿದೆ.

ನಗರದ ಚಿಲಿಂಬಿಯ ಮಲರಾಯ ದೇವಸ್ಥಾನ ಸಮೀಪದ ಮಾರ್ಸ್ ಆ್ಯಂಡ್ ವೀನಸ್ ಅಪಾರ್ಟ್ ಮೆಂಟ್ ಗೆ 53 ಸಾವಿರ ರೂ. ದಂಡ ಹಾಕಲಾಗಿದೆ. ಅಪಾರ್ಟ್ ಮೆಂಟ್ ನ 106 ಫ್ಲ್ಯಾಟ್ ಗಳಿಗೆ ತಲಾ 500 ರೂಪಾಯಿಯಂತೆ 53 ಸಾವಿರ ರೂ. ದಂಡ ವಿಧಿಸಲಾಗಿದೆ. ಜೂನ್ 5ರಂದು ಪಾಲಿಕೆಯ ಅಧಿಕಾರಿಗಳು ದಂಡ ವಿಧಿಸಿ ರಶೀದಿ ನೀಡಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ನೀರು ಸರಬರಾಜು ಸ್ಥಗಿತಗೊಳಿಸುವುದಾಗಿ ಪಾಲಿಕೆ ಎಚ್ಚರಿಕೆ ನೀಡಿದೆ.

ಮಂಗಳೂರು ಮಹಾನಗರಪಾಲಿಕೆ ತನ್ನ ವ್ಯಾಪ್ತಿಯಲ್ಲಿ ಬರುವ 60 ವಾರ್ಡ್ ಗಳಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ನೀಡುವಂತೆ ಸೂಚನೆ ನೀಡಿತ್ತು. ಇದು ಪಾಲಿಕೆ ವ್ಯಾಪ್ತಿಯ ಮನೆ, ಅಪಾರ್ಟ್ ಮೆಂಟ್, ವಾಣಿಜ್ಯ ಕಟ್ಟಡಗಳಿಗೆ ಅನ್ವಯವಾಗುತ್ತದೆ. ಶುಕ್ರವಾರ ಹೊರತುಪಡಿಸಿ ವಾರದ ಇತರ ಎಲ್ಲ ದಿನಗಳಲ್ಲಿ ಹಸಿ ಕಸ ಮತ್ತು ಶುಕ್ರವಾರ ಒಣ ಕಸ ನೀಡಲು ಅವಕಾಶ ಕಲ್ಪಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು