12:56 AM Tuesday26 - October 2021
ಬ್ರೇಕಿಂಗ್ ನ್ಯೂಸ್
ಶಿಕ್ಷಕರ ವರ್ಗಾವಣೆ:  ಅಕ್ಟೋಬರ್ 28ರಂದು ಕೌನ್ಸಿಲಿಂಗ್; ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ ಕಾರ್ಕಳ ಪುರಸಭೆ ಮಾಸಿಕ ಸಭೆ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಪಕ್ಷ ಕಾಂಗ್ರೆಸ್… ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: 7 ದಿನ ಕಳೆದರೂ ಆರೋಪಿ ರಾಜೇಶ್ ಭಟ್… ಇಂದಿರಾ ಕ್ಯಾಂಟೀನ್ ನಲ್ಲಿ ಭೋಜನ ವೈಭವ: ಬಡವರ ತುತ್ತಿನ ರುಚಿ ಸವಿದ ಕಾರ್ಕಳ ಪುರಸಭೆ… ರಾಯಚೂರು: ಗಲ್ಲಿ ಗಲ್ಲಿಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಹೆಚ್ಚಾದ ಮಟ್ಕಾ ಸಾರಾಯಿ, ಇಸ್ಪೀಟ್ ದಂಧೆ;… ಶಾಲೆಗಳಲ್ಲಿ ಮತ್ತೆ ಮಕ್ಕಳ ಕಲರವ: 1ರಿಂದ 5ನೇ ತರಗತಿ ವರೆಗೆ ಕ್ಲಾಸ್ ಆರಂಭ; ಆನ್… ಹೀಗೂ ಉಂಟೇ?!: ಗಂಡನನ್ನೇ 5 ಲಕ್ಷಕ್ಕೆ ಮಾರಿದ ಪತ್ನಿ; ಹಣ ಸಂದಾಯದ ವೇಳೆ… ಮಂಗಳೂರು: ಓನೆಕ್ಸ್ ಪಬ್‌ ಮೇಲೆ ಸಿಸಿಬಿ ಪೊಲೀಸರ ದಾಳಿ; ಧ್ವನಿವರ್ಧಕ ವಶ ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ… ಉಡುಪಿ ಜಿಲ್ಲಾದ್ಯಂತ ಭಾರಿ ಮಳೆ: ಅಜೆಕಾರಿನಲ್ಲಿ ಮನೆಗೆ ಸಿಡಿಲು ಬಡಿದು ಸುಟ್ಟು ಹೋದ…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಯಚೂರು ಜಿಲ್ಲೆಯಾದ್ಯಂತ  ಇಂದಿನಿಂದ ಜೂನ್ 11ರ ವರೆಗೆ ಕಠಿಣ ನಿರ್ಬಂಧ

08/06/2021, 06:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತು ಹೊರತುಪಡಿಸಿ ನಾಳೆಯಿಂದ(ಜೂನ್ 8) ಜೂನ್ 11ರ ವರೆಗೆ

ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ.

ದಿನಾಂಕ 08-06-2021(ಮಂಗಳವಾರ) ಮದ್ಯಾಹ್ನ 02-00 ಗಂಟೆಯಿಂದ 11-06-2021 (ಶುಕ್ರವಾರ) ರಾತ್ರಿ 12.00 ಗಂಟೆವರೆಗೆ ಈ  ಸಂಪೂರ್ಣ ನಿರ್ಬಂಧ ಜಾರಿಯಲ್ಲಿರುತ್ತದೆ.

ಬ್ಯಾಂಕ್ ಗಳು ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿ ಹಾಗೂ ಉಪ ನೋಂದಣಾಧಿಕಾರಿ ಕಚೇರಿಗಳು ಬೆಳಿಗ್ಗೆ 7.30 ಗಂಟೆಯಿಂದ 10.00ಗಂಟೆವರೆಗೆ ಕಾರ್ಯನಿರ್ವಹಿಸಲು ಮಾತ್ರ ಅನುಮತಿಸಲಾಗಿದೆ. ಮತ್ತು ಮದುವೆಗಳನ್ನು ನಿರ್ಬಂಧಿಸಲಾಗಿರುತ್ತದೆ. 

ಇತ್ತೀಚಿನ ಸುದ್ದಿ

ಜಾಹೀರಾತು