7:01 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ನಿಂದ ಆರ್ಥಿಕ ಮುಗ್ಗಟ್ಟು: ಕದ್ರಿಕಂಬ್ಲ ಸಮೀಪ ದಂಪತಿ ಆತ್ಮಹತ್ಯೆಗೆ ಶರಣು

09/06/2021, 18:12

ಮಂಗಳೂರು(reporterkarnataka news): ಲಾಕ್ ಡೌನ್ ನಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಗರದ ಕದ್ರಿಕಂಬ್ಲ ಸಮೀಪದ ಪಿಂಟೋ ಲೇನ್ ನಲ್ಲಿ ನಡೆದಿದೆ.

ಸುರೇಶ್ ಶೆಟ್ಟಿ(62) ಹಾಗೂ ವಾಣಿ(57) ದಂಪತಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಸುರೇಶ್  ಶೆಟ್ಟಿ ಅವರು ಪ್ರಸಿದ್ಧ ತಬ್ಲಾ ವಾದಕರು. ಆರ್ಕೇಸ್ಟ್ರಾಗಳಲ್ಲಿ ತಬ್ಲಾ ನುಡಿಸುತ್ತಿದ್ದರು. ವಾಣಿ ಅವರು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿದ್ದರು. ಅದರ ಜತೆಗೆ ಚಿಟ್ ಫಂಡ್ ನಡೆಸುತ್ತಿದ್ದರು. ಕೊರೊನಾ ಲಾಕ್ ಡೌನ್ ಆಗಿರುವುದರಿಂದ ಚಿಟ್ ಫಂಡ್ ಕಲೆಕ್ಷನ್ ಸರಿಯಾಗಿ ಆಗುತ್ತಿರಲಿಲ್ಲ. ಈ ಮಧ್ಯೆ ಹೂಡಿಕೆ ಮಾಡಿದವರಲ್ಲಿ ಕೆಲವರು ಕರೆ ಮಾಡಿ ಹಣ ಹಿಂತಿರುಗಿಸುವಂತೆ ಪೀಡಿಸುತ್ತಿದ್ದರು. ಇದರಿಂದ ನೊಂದ ವಾಣಿ ಅವರು ಬುಧವಾರ ಬೆಳಗ್ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದರು. ಈ ವಿಷಯ ಅರಿತ ಪತಿ ಸುರೇಶ್ ಶೆಟ್ಟಿ ಅವರು ತಕ್ಷಣ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಜತೆ ಮಾತನಾಡಿದ ಪೊಲೀಸ್ ಕಮಿಷನರ್, ಬಹಳ ದುಃಖಕರ ವಿಷಯ. ಇದನ್ನು ಅವರು ಪೊಲೀಸರ ಗಮನಕ್ಕೆ ತರುತ್ತಿದ್ದರೆ, ಹಣಕ್ಕಾಗಿ ಒತ್ತಡ ಹಾಕುತ್ತಿರುವವರನ್ನು ಕರೆಸಿ ಮಾತುಕತೆ ನಡೆಸಬಹುದಿತ್ತು. ಹಣ ಮರು ಪಾವತಿಗೆ ಕಾಲಾವಕಾಶ ಕೇಳಿ ಸಮಸ್ಯೆ ಪರಿಹರಿಸಬಹುದಿತ್ತು. 

ಸಾಲ, ಇಎಂ ಐ ಕಟ್ಟಲು ಯಾರಾದರೂ ಪೀಡಿಸಿದರೆ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು