11:21 PM Friday19 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ: ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಹಿತ ಹಲವರ ಬಂಧನ

11/06/2021, 15:00

ಬೆಂಗಳೂರು (reporterkarnataka news): ದೇಶದಲ್ಲಿ ತೈಲ ಬೆಲೆಯೇರಿಕೆಯ ವಿರುದ್ದ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮಂದಿ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್ ಬೆಲೆ 100ರ ಗಡಿದಾಟುತ್ತಿದ್ದಂತೆಯೇ ಕೆಪಿಸಿಸಿ 5 ದಿನಗಳ ಪ್ರತಿಭಟನೆಗೆ ಕರೆ ನೀಡಿತ್ತು. ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ 5000 ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ಬೆಂಗಳೂರಿನ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಕೋವಿಡ್ ನಿಯಮದ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯ ವರೆಗೆ ಮಾತ್ರವೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರಿಗೆ ಅನುಮತಿ ನೀಡಲಾಗಿತ್ತು. ಆದರೆ 10 ಗಂಟೆಯ ನಂತರವೂ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಕೈ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು