8:36 PM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ:  ಮುಂಗಾರು ಹಂಗಾಮಿನ ಸಿದ್ಧತಾ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್

13/06/2021, 08:42

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಅಭಾವವಿಲ್ಲ. ಈ ವರ್ಷ ವಾಡಿಕೆ ಮಳೆಗಿಂತ ಶೇ . 35 ರಷ್ಟು ಹೆಚ್ಚಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 2021ರ ಮುಂಗಾರು ಹಂಗಾಮಿನ ಸಿದ್ಧತೆಯ ಕುರಿತು ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ರೈತರಿಗೆ ಯಾವುದೇ ಕಾರಣಕ್ಕೂ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಕೊರತೆ ಆಗದಂತೆ ಕ್ರಮವಹಿಸಿ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು.

ಬಿತ್ತನೆ ಬೀಜ , ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದರೆ ಅಥವಾ ಸರ್ಕಾರ ನಿಗದಿಪಡಿಸಿದ ಬೆಲೆಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅವರ ಪರವಾನಗಿಯನ್ನು 1 ವರ್ಷಗಳ ಕಾಲ ರದ್ದು ಪಡಿಸಿ ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಕೃಷಿ ಅಧಿಕಾರಿಗಳು ರೈತರಿಗೆ ಸ್ನೇಹಿ ಆಗಿರಬೇಕು . ರೈತರ ಸಮಸ್ಯೆಗಳಿಗೆ ಕೃಷಿ ವಿಶ್ವವಿದ್ಯಾಲಯದಿಂದ ವಿಜ್ಞಾನಿಗಳು ಮತ್ತು ಪ್ರೊಫೆಸರ್‌ಗಳನ್ನು ಜಿಲ್ಲೆಗೆ ಕಳುಹಿಸಿ ಕೊಡಲಾಗುವುದು. ರೈತರ ಭೂಮಿಯ ಮಣ್ಣಿನ ಫಲವತ್ತತೆ , ನೀರಿನ ಸಮಸ್ಯೆ ಹಾಗೂ ಬೆಳೆಗಳಿಗೆ ರೋಗ ಬಂದರೆ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು ಮತ್ತು ಪ್ರೊಫೆಸರ್‌ಗಳು ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು . ಸಣ್ಣ ರೈತರಿಗೆ ಟ್ಯಾಕ್ಟರ್ ಮತ್ತು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಸಾಧ್ಯವಾಗುವುದಿಲ್ಲ . ಆದ್ದರಿಂದ ಸರ್ಕಾರ ಕೃಷಿ ಯಂತ್ರಧಾರೆಗಳಿಗೆ ಶೇ .70 ರಷ್ಟು ಸಬ್ಸಿಡಿ ನೀಡುತ್ತಿದೆ . ಕೃಷಿ ಯಂತ್ರಧಾರೆಗಳು ರೈತರಿಗೆ ಅನುಕೂಲವಾಗುವಂತೆ ಕಾರ್ಯನಿರ್ವಹಿಸಬೇಕು . ಒಂದು ವೇಳೆ ಕಾರ್ಯನಿರ್ವಹಿಸದಿದ್ದರೆ ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು. 

ಭಾರತ ದೇಶದಲ್ಲಿ ಕೃಷಿ ಮತ್ತು ಕಂದಾಯ ಇಲಾಖೆಗಳ ಆಧಾರ್ ಜೋಡಣೆಯಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಎನ್.ಎಫ್.ಎಸ್.ಎಂ. ( ನ್ಯಾಷನಲ್ ಫುಡ್ ಸೆಕ್ಯೂರಿಟಿ ಮಿಷನ್ ) ಕನಸಿನ ಯೋಜನೆಯಾಗಿದೆ . ಈ ಯೋಜನೆಯಲ್ಲಿ ಬಹುಬೆಳೆಗಳನ್ನು ಬೆಳೆದು ರೈತರು ಹೆಚ್ಚಿನ ಆದಾಯ ಪಡೆಯಲು ಸರ್ಕಾರ ಕಾರ್ಯಕ್ರಮಗಳನ್ನು ಕೈಗೊಂಡಿದೆ . ಇದರ ಬಗ್ಗೆ ಮಾಹಿತಿಯನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. 

ರೈತರು ಬೆಳೆದ ಬೆಳೆಯ ಸಮೀಕ್ಷೆಯನ್ನು ರೈತರೇ ಮಾಡಿ , ಅದನ್ನು ವೆಬ್‌ಸೈಟ್ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡುವಂತಾಗಬೇಕು . ಈ ಮಾಹಿತಿಯು ರೈತರಿಗೆ ಆರ್.ಟಿ.ಸಿ ಯಲ್ಲಿ ಸಹ ದೊರೆಯುವಂತೆ ಸರ್ಕಾರ ಕ್ರಮಕೈಗೊಂಡಿದೆ . ಈ ಕುರಿತು ಜಿಲ್ಲೆಯ ಎಲ್ಲಾ ರೈತರಿಗೆ ಮಾಹಿತಿ ನೀಡಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕರಾದ ರೂಪಾದೇವಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಳೆಗೆ ಯಾವುದೇ ಕೊರತೆಯಾಗಿಲ್ಲ . ಪ್ರಸಕ್ತ ಸಾಲಿನಲ್ಲಿ ಹೆಚ್ಚಿನ ಮಳೆಯಾಗುತ್ತಿದೆ . ಬಿತ್ತನೆ ಬೀಜ , ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ . ಕೋವಿಡ್ ನಿಯಮಗಳನ್ನು ಪಾಲಿಸಿ , ರೈತರಿಗೆ ಸೋಮವಾರದಿಂದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ರೈತ ಸಂಪಪರ್ಕ ಕೇಂದ್ರಗಳ ಮೂಲಕ ವಿತರಣೆ ಮಾಡುತ್ತೇವೆ ಎಂದು ಹೇಳಿದರು ಜಿಲ್ಲೆಯು ಪೂರ್ವ ಕೃಷಿ ಒಣ ವಲಯವಾಗಿದ್ದು , ಜಿಲ್ಲೆಯಲ್ಲಿ ವಾರ್ಷಿಕ ಸರಾಸರಿ 775 ಮಿ.ಮೀ. ಮಳೆಯಾಗುತ್ತಿದ್ದು , ಗರಿಷ್ಠ 1056 ಮಿ.ಮೀ. , ಕನಿಷ್ಠ 538 ಮಿ.ಮೀ. ಮಳೆಯಾಗಿದೆ . ಒಟ್ಟು 374966 ಹೆಕ್ಟೇರ್ ಭೌಗೋಳಿಕ ವಿಸ್ತೀರ್ಣ ಹೊಂದಿದ್ದು , ನಿವ್ವಳ ಬಿತ್ತನೆ ಪ್ರದೇಶ 2,09,566 ಹೆಕ್ಟೇರ್ ಆಗಿದೆ . ಕೃಷಿ ಬೆಳೆಗಳ ವಿಸ್ತೀರ್ಣ 97900 ಹೆಕ್ಟರ್ ಆಗಿದೆ . ನೀರಾವರಿ ಪ್ರದೇಶ ( ನಿವ್ವಳ ) 51702 ಹೆಕ್ಟೇರ್ ಆಗಿದೆ. ಒಟ್ಟು 303475 ಹಿಡುವಳಿದಾರರಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

 ಈ ಸಂದರ್ಭದಲ್ಲಿ ಕೃಷಿಗೆ ಸಂಬಂಧಿಸಿದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು . ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆಯಡಿ ರೈತರಿಗೆ ತೊಗರಿ ಬಿತ್ತನೆ ಬೀಜದ ಕಿರುಚೀಲಗಳನ್ನು ವಿತರಿಸಲಾಯಿತು . 

ಸಭೆಯಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ , ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ನಾಗೇಶ್ , ವಿಧಾನ ಪರಿಷತ್ ಸದಸ್ಯರಾದ ಗೋವಿಂದರಾಜು , ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎನ್.ಎಂ.ನಾಗರಾಜ್ , ಉಪವಿಭಾಗಾಧಿಕಾರಿ ಸೋಮಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು