8:48 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ನಕಲಿ ಪತ್ರಕರ್ತನ ಸೆರೆ: 70 ಸಾವಿರ ರೂ.ಮೌಲ್ಯದ ಸಾಮಗ್ರಿ ವಶ, ನ್ಯಾಯಾಂಗ ಬಂಧನ

14/06/2021, 07:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕಳ್ಳತನ ಮಾಡಿದ ಸಾಮಗ್ರಿಗಳನ್ನು ಮಾರಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಪಿಎಸ್ ಐ ಪ್ರಕಾಶ್ ರೆಡ್ಡಿ ನೇತೃತ್ವದ ತಂಡ ಮಿಂಚಿನ ದಾಳಿ ನಡೆಸಿ ಬಂಧಿಸಿದೆ. ಆತನಿಂದ 70 ಸಾವಿರ ರೂ. ಬೆಲೆ ಬಾಳುವ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೃತ್ತಿಯಲ್ಲಿ ಮೆಕ್ಯಾನಿಕನಾಗಿ ಯುವಕ ಪಟೇಲ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಲಿಂಗಸಗೂರ  ಪಟ್ಟಣದಲ್ಲಿ ಮನೆ ಮುಂದೆ ನಿಂತಿದ್ದ ಬೈಕುಗಳ ಪೆಟ್ರೋಲ್, ಸೀಟ್ , ಟಯರ್  ಕಳ್ಳತನ ಮಾಡುತ್ತಿದ್ದ. ಈತನಿಗೆ ಇತರ ಮೂವರು ಸಹಾಯ ಮಾಡುತ್ತಿದ್ದರು. ಕಳವಿನ ಸಾಮಗ್ರಿಗಳನ್ನು ಬೇರೆ ಬೈಕ್ ಗಳಿಗೆ ಜೋಡಿಸಿ ಮಾರಾಟ ಮಾಡುತ್ತಿದ್ದ. ಈತನಿಂದ ಎರಡು ಬೈಕುಗಳ ಸೀಟ್ ಕವರ್, 2 ಫೈಯರ್ ಟ್ಯಾಂಕ್, 5 ಟಯರ್ ಸೇರಿ 70 ಸಾವಿರ ಬೆಲೆಯ ವಸ್ತುಗಳನ್ನು ಜಫ್ತಿ ಮಾಡಲಾಗಿದೆ.  ಈತ ತಾನೊಬ್ಬ ಪತ್ರಕರ್ತ ಎಂದು ಯಾವುದೋ ಬೇನಾಮಿ ಐಡಿ ಇಟ್ಟುಕೊಂಡು ತಿರುಗಾಡುತ್ತಿದ್ದ.

ಡಿವೈಎಸ್ಪಿ ಮಾರ್ಗದರ್ಶನದ ನೇತೃತ್ವದ ಪಿಎಸ್ಐ ಪ್ರಕಾಶ್ ರೆಡ್ಡಿ ಮಿಂಚಿನ ದಾಳಿ ನಡೆಸಿ ನಕಲಿ ಪತ್ರಕರ್ತ ನನ್ನ ಬಂಧಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು