5:31 AM Thursday29 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆ? ರಾಜ್ಯದಿಂದ ಯಾರಿಗೆ ಸಚಿವ ಸ್ಥಾನ ? 

14/06/2021, 07:38

ನವದೆಹಲಿ(reporterkarnataka news): ಕೇಂದ್ರ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದ್ದು, ರಾಜ್ಯದಿಂದ ಒಬ್ಬರು ಹಾಗೂ ಮಧ್ಯಪ್ರದೇಶದಿಂದ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಅಸ್ಸಾಂನಿಂದ ಮಾಜಿ ಸಿಎಂ ಸರ್ಬಾನಂದ ಸೋನೋವಾಲ್ ಅವರು ಸಂಪುಟ ಸೇರುವ ಸಾಧ್ಯತೆಗಳಿವೆ.

ಪ್ರಧಾನಿ ನರೇಂದ್ರ ಮೋದಿ ಸಂಪುಟದಿಂದ ಶಿವಸೇನೆ ಮತ್ತು ಶಿರೋಮಣಿ ಅಕಾಲಿದಳ ಈಗಾಗಲೇ ಹೊರ ನಡೆದಿದೆ. ಕೇಂದ್ರ ಸಚಿವರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಹಾಗೂ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಸ್ಥಾನಗಳು ಖಾಲಿ ಉಳಿದಿವೆ. ಇದರಿಂದ ಸಂಪುಟ ವಿಸ್ತರಣೆ ಅನಿವಾರ್ಯವಾಗಿದೆ.

ಮೋದಿ ಸಂಪುಟದಲ್ಲಿ ಸಹಾಯಕ ರೈಲ್ವೆ ಸಚಿವರಾಗಿದ್ದ ಸುರೇಶ್ ಅಂಗಡಿ ಸಾವಿನಿಂದ ತೆರವಾದ ಸ್ಥಾನವನ್ನು ರಾಜ್ಯದಿಂದಲೇ ತುಂಬಲಾಗುವುದು. ವಿಶ್ವ ಪ್ರಸಿದ್ಧ ಹೃದಯ ತಜ್ಞ ಡಾ. ದೇವಿಪ್ರಸಾದ್ ಶೆಟ್ಟಿ ಅವರನ್ನು ಸಂಪುಟಕ್ಕೆ ಸೇರಿಸಲಾಗುವುದು ಎಂಬ ಮಾಹಿತಿ ಇದೆ. ಡಾ. ದೇವಿಪ್ರಸಾದ್ ಶೆಟ್ಟಿ ಅವರಿಗೆ ಆರೋಗ್ಯ ಖಾತೆ ನೀಡಲಾಗುತ್ತದೆ ಎನ್ನಲಾಗುತ್ತಿದೆ.

ಮಧ್ಯಪ್ರದೇಶದ ಪ್ರಭಾವಿ ಯುವ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ, ಅಸ್ಸಾಂ ಮಾಜಿ ಸಿಎಂ ಸರ್ಬಾನಂದ ಸೋನೋವಾಲ್, ಬಿಹಾರ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ಮೋದಿ ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಹೇಳಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು