11:54 PM Thursday27 - January 2022
ಬ್ರೇಕಿಂಗ್ ನ್ಯೂಸ್
ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ.… ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ… ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ ಹಾಡು ನಿಲ್ಲಿಸಿದ ಪ್ರಸಿದ್ಧ ಸಂಗೀತ ಕಲಾವಿದೆ, ಆರ್ಯಭಟ ಪ್ರಶಸ್ತಿ ವಿಜೇತೆ ಶೀಲಾ ದಿವಾಕರ್  ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ನಿರಾಕರಣೆ: ಮಂಗಳೂರಿನಲ್ಲಿ ಸ್ವಾಭಿಮಾನ ನಡಿಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ ಆಡಳಿತದಲ್ಲಿ ಮೇಜರ್ ಸರ್ಜರಿ: ರಾಜ್ಯದ 19 ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ ಗಣರಾಜ್ಯೋತ್ಸವ ಪಥ ಸಂಚಲನ: ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ 6 ಮಂದಿ… ಏಪ್ರಿಲ್ 27ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಎತ್ತಿನಹೊಳೆ ಯೋಜನೆ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ತಾಕೀತು

ಇತ್ತೀಚಿನ ಸುದ್ದಿ

ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು ಬಿಜೆಪಿ ಭಿನ್ನಮತ ಉಪಶಮನಕ್ಕೆ ಹೊರತು ಮುಖ್ಯಮಂತ್ರಿ ಬದಲಾವಣೆಗೆ ಅಲ್ಲ!

16/06/2021, 18:45

ಬೆಂಗಳೂರು(reporterkarnataka news): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತ ಸಂಬಂಧಿಸಿದಂತೆ ಮಾತುಕತೆ ನಡೆಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ಪಕ್ಷದಲ್ಲಿ ಉಂಟಾಗಿರುವ ಬೆಳವಣಿಗೆ ಕುರಿತು ಚರ್ಚಿಸಲಿದ್ದಾರೆ.

ಮಧ್ಯಾಹ್ನ 3.45ರ ವೇಳೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಕುಮಾರಕೃಪಾ ಗೆಸ್ಟ್ ಹೌಸ್ ಗೆ ತೆರಳಿದ್ದಾರೆ. ನಂತರ ಪಕ್ಷದ ವಿವಿಧ ನಾಯಕರು ಹಾಗೂ ಶಾಸಕರುಗಳ ಜತೆ ಸಭೆ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂತಾದ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ.

ಅರುಣ್ ಸಿಂಗ್ ಅವರು ಮೂರು ದಿನಗಳ ಕಾಲ ರಾಜ್ಯದಲ್ಲಿ ತಂಗಿ ವಿವಿಧ ನಾಯಕರ ಜತೆ ಮಾತುಕತೆ ನಡೆಸಲಿದ್ದು, ರಾಜ್ಯದಲ್ಲಿ ಉದ್ಬವಿಸಿರುವ ನಾಯಕತ್ವ ಪ್ರಶ್ನೆಗೆ ತಾರ್ಕಿಕ ಅಂತ್ಯ ಹಾಡುವ ಸಾಧ್ಯತೆಗಳಿವೆ. ಅರುಣ್ ಸಿಂಗ್ ಅವರು ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಭಿನ್ನಮತವನ್ನು ಉಪಶಮನಗೊಳಿಸಲು ವಿವಿಧ ನಾಯಕರ ಜತೆ ಸಭೆ ನಡೆಸಲಿದ್ದಾರೆ ಹೊರತು ರಾಜ್ಯದ ನಾಯಕತ್ವ ಬದಲಾವಣೆಯ ಕುರಿತು ಚರ್ಚೆ ನಡೆಸುವುದಿಲ್ಲ ಎಂದು ಪಕ್ಷದ ವಿಶ್ವಸನೀಯ ಮೂಲಗಳಿಂದ ರಿಪೋರ್ಟರ್ ಕರ್ನಾಟಕಕ್ಕೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು