8:59 PM Sunday17 - October 2021
ಬ್ರೇಕಿಂಗ್ ನ್ಯೂಸ್
ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು… ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ… ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು… ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು… ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ… ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು;… ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ… ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ… ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ;… ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ,…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಹಾನಿಗೆ ಮರಳು ಮಾಫಿಯಾ ಕಾರಣ: ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪ

16/06/2021, 09:47

ಮಂಗಳೂರು(reporterkarnataka news): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.

ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಅವರು ಹೇಳಿದರು.
ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮುಂದಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ವಹಿಸಬೇಕಿತ್ತು. ಹಿಂದೆಲ್ಲಾ ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳ ಅತಿಥಿ ಗೃಹಗಳಲ್ಲಿ ಶಿಬಿರ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುತ್ತಿದ್ದರು. ಅಂತಹ ವ್ಯವಸ್ಥೆ ಈಗ ಇಲ್ಲ ಎಂದು ಹೇಳಿದ ಅಭಯಚಂದ್ರ ಜೈನ್, ಇದೀಗ ಮರವೂರು ಸೇತುವೆಯ ಜತೆಗೆ ಬಹುಗ್ರಾಮ ಕುಡಿಯುವ ನೀರಿಗಾಗಿ ಹಿಂದಿನ ಶಾಸಕರಾದ ವಿಜಯ ಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೂ ಅಪಾಯವನ್ನು ತಂದೊಡ್ಡಿದೆ. ಜತೆಗೆ ಕೊಂಕಣ ರೈಲ್ವೆಯ ಸೇತುವೆಯೂ ಇಲ್ಲಿ ಹಾದು ಹೋಗುತ್ತಿದ್ದು, ಅದಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು