4:07 PM Sunday1 - August 2021
ಬ್ರೇಕಿಂಗ್ ನ್ಯೂಸ್
ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ… ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ… ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?:… ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ… Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ…

ಇತ್ತೀಚಿನ ಸುದ್ದಿ

ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ

21/06/2021, 16:58

ರಾಹುಲ್ ಅಥಣಿ ಬೆಳಗಾವಿ
ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.  

ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ಮಾದ್ಯಮ ಜೊತೆ ಮಾತನಾಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೊಗಿಲ್ಲ, ಅವರ ಕ್ಷೇತ್ರದಲ್ಲಿ ಇರುವರು, ಮತ್ತೆ ನಾನು ಬಾಂಬೆಗೆ ಹೋಗಿದ್ದೇನೆ ಎಂಬ ಸುದ್ದಿಗಳು ಬರುತ್ತಿದ್ದವು, ನಾನು ಕೂಡ ಅಥಣಿ ಕ್ಷೇತ್ರದಲ್ಲಿ ಇದ್ದೆನೆ, 15 ಜನ ಶಾಸಕರು ಅವರವರ ಕ್ಷೇತ್ರದಲ್ಲಿ ಇರಬಹುದು, ಅವರನ್ನು ನೀವು ಕೇಳಿ. ನಾನು ಮಾತ್ರ ಅಥಣಿಯಲ್ಲಿ ಇದ್ದೇನೆ ಎಂದರು.

17 ಜನ ಶಾಸಕರಿಂದ ಬಿಜೆಪಿ ಸರ್ಕಾರದಲ್ಲಿ ಗೊಂದಲವಾಗಿದೆ  ಎಂಬ ಸಚಿವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಸಿದ ಕಮಟಳ್ಳಿ ,

 ಈಶ್ವರಪ್ಪನವರು ನಮ್ಮ ಹಿರಿಯರು, ನಮ್ಮನ್ನು ಅತಿ ಪ್ರೀತಿಯಿಂದ ಕಾಣುವರು. ಅವರ ಇಲಾಖೆಯಲ್ಲಿ ನಮ್ಮ ಕ್ಷೇತ್ರಕ್ಕೆ ಬೇಕಾದ ಕೆಲಸಗಳನ್ನು ಮುತುವರ್ಜಿಯಿಂದ ಮಾಡುತ್ತಾರೆ. ಆ ಅರ್ಥದಲ್ಲಿ ಅವರು ಮಾತನಾಡಿಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ಪ್ರಶ್ನೆಯಿಲ್ಲ. ಸುಮ್ಮನೆ ವದಂತಿಗಳು ಹರಿದಾಡುತ್ತಿದೆ, ಮೊನ್ನೆ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಅದಕ್ಕೆಲ್ಲ ತೆರೆ ಎಳೆದಿದ್ದಾರೆ. ನಾನು ಸಿಎಂ ಪರವಾಗಿ ಇರುವನು. ನಮ್ಮ ಬೆಂಬಲ ಬಿಎಸವೈ ಎಂದು ಪ್ರತಿಕ್ರಿಯಿಸಿದರು.

ಸಚಿವ ಶ್ರೀಮಂತ ಪಾಟೀಲ್ ತಮ್ಮ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಅದ್ಲು ಬದಲು ಆಗುವುದಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು