8:24 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಅನ್ ಲಾಕ್: ಮತ್ತೆ ನಗರದತ್ತ ಮುಖ ಮಾಡಿದ ಭಾರಿ  ಜನಸ್ತೋಮ; ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಫುಲ್ ಫುಲ್

21/06/2021, 14:54

ನವದೆಹಲಿ(reporterkarnataka news):  ದೇಶದ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಹಾಗೂ ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಎರಡನೇ ಹಂತದ ಅನ್‌ಲಾಕ್‌ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಜನರು ಮತ್ತೆ ನಗರದತ್ತ ಮುಖ ಮಾಡಿದ್ದಾರೆ. ಸಾವಿರಾರು ಜನರು ದಿಲ್ಲಿ, ಮುಂಬೈ, ಬೆಂಗಳೂರು, ಚೆನ್ನೈ ನಗರವನ್ನು ಪ್ರವೇಶಿಸುತ್ತಿದ್ದಾರೆ. ಇದರ ಜತೆಗೆ ಅಂಗಡಿ ಮುಂಗಟ್ಟುಗಳು, ವ್ಯಾಪಾರೋದ್ಯಮ, ವಾಣಿಜ್ಯ ಚಟುವಟಿಕೆಗಳು ಮತ್ತೆ ಗರಿ ಬಿಚ್ಚಿದೆ.

ಮುಂಬೈ, ದೆಹಲಿ, ಚೆನ್ನೈ, ಬೆಂಗಳೂರಿನಂತಹ ಮಹಾನಗರಗಳಿಂದ ತಮ್ಮ ತಮ್ಮ ಊರಿಗೆ ತೆರಳಿದ್ದ ಜನರು ಮತ್ತೆ ಹಿಂತಿರುಗುತ್ತಿದ್ದಾರೆ. ಬದುಕು ಕಟ್ಟಲು ಮತ್ತೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಏಕಾಏಕಿ ನಗರಗಳನ್ನು ಪ್ರವೇಶಿಸುತ್ತಿದ್ದಾರೆ. ಮುಂಬೈ, ಬೆಂಗಳೂರು, ಚೆನ್ನೈ,  ದೆಹಲಿ,ಚಂಡಿಗಢ ಮುಂತಾದ ಕಡೆಗಳಲ್ಲಿ ಮಾರುಕಟ್ಟೆಗಳು, ಬಸ್‌ ನಿಲ್ಧಾಣ, ರೈಲ್ವೆ ನಿಲ್ದಾಣಗಳು ಜನ ಜಂಗುಳಿಯಿಂದ ತುಂಬಿ ಹೋಗಿದೆ.

ಅನ್‌ಲಾಕ್ ಪ್ರಕ್ರಿಯೆಯಿಂದ ನಗರಗಳಲ್ಲಿ ಉಂಟಾಗುತ್ತಿರುವ ಜನ ದಟ್ಟಣೆಯನ್ನುತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌, ಸ್ಯಾನಿಟೈಜರ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ ಎಂದಿರುವ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು