9:14 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ , ಸಚಿವರಿಗೆ ಮನವಿ: ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಲು ಆಗ್ರಹ

22/06/2021, 09:07

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ , ಚಿಕ್ಕಬಳ್ಳಾಪುರ , ಬೆಂಗಳೂರು ಗ್ರಾಮಾಂತರ , ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ , ರಾಜ್ಯದಲ್ಲಿ ಉತ್ಪತ್ತಿಯಾಗುವ ಶೇ .೭೦ ರಷ್ಟು ಮಾವು ಈ ಪ್ರದೇಶಗಳಲ್ಲೇ ಬೆಳೆಯುತ್ತಾರೆ ಎಂದು ಗಮನಕ್ಕೆ ತಂದಿದ್ದಾರೆ .

ದೇಶ ವಿದೇಶಗಳಿಗೂ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ , ವ್ಯಾಪಾರಿಗಳು , ದಲ್ಲಾಳಿಗಳ ಹಾವಳಿಯಿಂದಾಗಿ ಪ್ರತಿ ಟನ್ ಮಾವಿಗೆ ೩ ಸಾವಿರದಿಂದ ೫ ಸಾವಿರದವರಗೂ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ . ಒಂದು ಎಕರೆ ಮಾವು ಬೆಳೆಯಲು ರೈತನಿಗೆ ೧೫ ರಿಂದ ೨೦ ಸಾವಿರ ರೂ ಖರ್ಚಾಗುತ್ತದೆ . ಇದರಿಂದ ರೈತರು ಬಹಳ ನಷ್ಟಕ್ಕೆ ಒಳಗಾಗಿದ್ದಾರೆ . ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ರೈತ ತಲುಪಿದ್ದಾನೆ ಎಂದು ಗಮನಕ್ಕೆ ತಂದಿದ್ದಾರೆ .

ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ರಕ್ಷಣೆಗೆ ಬರಬೇಕು , ತಕ್ಷಣವೇ ಮಧ್ಯೆ ಪ್ರವೇಶಿಸಿ ಪ್ರತಿ ಟನ್ ಮಾವಿಗೆ ೧೦ ಸಾವಿರ ರೂಗಳ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ೨೫ ಸಾವಿರ ರೂಗಳ ವಿಶೇಷ ಪರಿಹಾರವನ್ನು ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು