5:05 PM Sunday1 - August 2021
ಬ್ರೇಕಿಂಗ್ ನ್ಯೂಸ್
ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ… ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ… ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?:… ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ… Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ…

ಇತ್ತೀಚಿನ ಸುದ್ದಿ

ವಿದೇಶಗಳಿಗೆ ತೆರಳುವ‌ವರಿಗೆ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ಲಸಿಕೆ: ಶಾಸಕ ವೇದವ್ಯಾಸ ಕಾಮತ್  ಪರಿಶೀಲನೆ  

25/06/2021, 19:20

ಮಂಗಳೂರು(reporterkarnataka news): ಉದ್ಯೋಗ, ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ‌ವರಿಗೆ ಲಸಿಕೆ ವಿತರಣೆಯು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯುತ್ತಿದ್ದು,

ಶಾಸಕ ಡಿ. ವೇದವ್ಯಾಸ್ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಉದ್ಯೋಗಕ್ಕಾಗಿ, ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ವಾರಾಂತ್ಯದ ದಿನಗಳಲ್ಲಿ ಲಸಿಕೆ ವಿತರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲ್ ನಲ್ಲಿ ನಡೆಯುವ ಲಸಿಕಾ ಶಿಬಿರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಯಿತು ಎಂದರು.

ಜಿಲ್ಲೆಯ ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡಲು ನಮ್ಮ ಸರಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಸಹಕಾರದೊಂದಿಗೆ ಅಶಕ್ತರಿಗಾಗಿ ಸಂಚಾರಿ ವಾಹನವನ್ನು ಕೂಡ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯ ನಿರ್ವಹಿಸುತಿದ್ದು ಜಿಲ್ಲೆಯ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ  ಚೇರ್ ಮೆನ್ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮ, ರೋಟರಿ‌ ಸಂಸ್ಥೆಯ ಪ್ರಮುಖರಾದ ಯತೀಶ್ ಬೈಕಾಂಪಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು