9:38 PM Sunday17 - October 2021
ಬ್ರೇಕಿಂಗ್ ನ್ಯೂಸ್
ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು… ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ… ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು… ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು… ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ… ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು;… ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ… ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ… ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ;… ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ,…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜು ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಜಾಲ ಗೋಷ್ಠಿ

26/06/2021, 23:39

ಮಂಗಳೂರು(reporterkarnataka news): ಕೆನರಾ ಕಾಲೇಜಿನ ಆಡಳಿತ ವ್ಯವಹಾರ ವಿಭಾಗ ಹಾಗೂ ಕ್ರೀಡಾ ವಿಭಾಗ ಜಂಟಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಾಲ ಗೋಷ್ಠಿಯ ಮೂಲಕ ಆಚರಿಸಲಾಯಿತು.

ಯೋಗ ಹಾಗೂ ಆರೋಗ್ಯ ನಿರ್ವಹಣೆಯ ಬಗ್ಗೆ ಉಪನ್ಯಾಸ ಹಾಗೂ ಸರಳ ಯೋಗ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು,

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ  ಏಕನಾಥ್ ಬಾಳಿಗಾ ಮುಖ್ಯ ಅತಿಥಿಯಾಗಿ ಮಾತನಾಡಿ, ಯೋಗ ನಿರಂತರ ಅಭ್ಯಾಸವೇ ಹೊರತು ಧರ್ಮವಲ್ಲ. ಭಾರತ ಅನೇಕ ಪ್ರಥಮಗಳ ತವರು, ಶೂನ್ಯ, ಯೋಗ, ಆಯುರ್ವೇದ, ಸಂಗೀತ ಕಲೆಗಳ ಉಗಮ ಭಾರತವಾಗಿದ್ದು, ವಿದೇಶಿಗರು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಅಭ್ಯಸಿಸುತ್ತಿದ್ದಾರೆ. ಅವರನ್ನು ಕಂಡು ನಾವು ಕಲಿಯುವ ಸ್ಥಿತಿಗೆ ಬಂದಿರುವುದು ಸರಿಯಲ್ಲ, ದಿನನಿತ್ಯದ ಸರಳ ಯೋಗ, ಧ್ಯಾನ ಇವುಗಳಿಂದ ದೇಹ ಹಾಗೂ ಮನಸ್ಸಿನ ಹತೋಟಿ ಸಾಧ್ಯ, ಹಾಗೂ ಸರಿಯಾದ ಸ್ಥಿರ ಆರೋಗ್ಯಕ್ಕೆ ಇದು ಬುನಾದಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೆನರಾ  ಹೈಸ್ಕೂಲ್ ಅಸೋಸಿಯೇಷನ್ ನ ಖಜಾಂಜಿ ಎಂ.  ವಾಮನ ಕಾಮತ್ ಧ್ಯಾನ, ಪ್ರಾಣಾಯಾಮ ಹಾಗೂ ಯೋಗಾಸನಗಳು ತಾರುಣ್ಯ ವೃದ್ಧಿಸುವುದಲ್ಲದೆ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತವೆ ಎಂದು ಹೇಳಿದರು.

ಕಾಲೇಜಿನ ಹಳೆ ವಿದ್ಯಾರ್ಥಿಗಳಾಗಿ ಏಕನಾಥ್ ಬಾಳಿಗಾ ಮಾತನಾಡಿ,  ತಾನು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಣ ಮೌಲ್ಯಗಳನ್ನು ಹಂಚುವಲ್ಲಿ ತಮಗಾದ ಸಂತೋಷವನ್ನು ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ ಪ್ರೇಮಲತಾ ವಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. 

ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಪುಷ್ಪಲತಾ ಸ್ವಾಗತಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ವಂದಿಸಿದರು. ಉಪನ್ಯಾಸಕಿ ಪ್ರಿಯಾಂಕಾ ಕಾರ್ಯಕ್ರಮ ನಿರೂಪಿಸಿದರು .

ಇತ್ತೀಚಿನ ಸುದ್ದಿ

ಜಾಹೀರಾತು