8:36 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಗುಂಡಿ ಮುಚ್ಚುತ್ತಿದ್ದರೂ ಸಸಿ ಇನ್ನೂ ಬಂದಿಲ್ಲ; ಹಸುರಿನ ಹೆಸರಿನಲ್ಲಿ ಲಕ್ಷಾಂತರ ರೂ. ಅಪವ್ಯಯ

26/06/2021, 17:15

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಅಂತರಗಂಗ

info.reporterkarnataka@gmail.com

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಸ್ಕಿ ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆದು ಹಲವಾರು ದಿನಗಳು ಕಳೆದರು ಸಸಿಗಳನ್ನು ನಾಟಿ ಮಾಡದೇ ತೆಗೆದು ಗುಂಡಿಗಳು ಮುಚ್ಚಿ ಹೋಗುತ್ತಿವೆ.

ಸರ್ಕಾರದ ಬೊಕ್ಕಸಕ್ಕೆ ಇದರಿಂದ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ? ಸರ್ಕಾರ ಸಂಕಷ್ಟದ ಸಮಯದಲ್ಲಿ ಹೀಗೆ ಆದರೂ ದೇಶದ ಅಭಿವೃದ್ಧಿಯಲ್ಲಿ ಕುಂಠಿತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಸಂಬಂಧಪಟ್ಟ ಇಲಾಖೆಯವರು ಆದಷ್ಟು ಬೇಗನೆ ಸಸಿಗಳನ್ನು ನಾಟಿ ಮಾಡಲು ವ್ಯವಸ್ಥೆ ಮಾಡಬೇಕೆಂದು  ರೈತ ಪ್ರೇಮಿ ಯಮನೂರ್ ನಾಯಕ್ ಒತ್ತಾಯಿಸಿದ್ದಾರೆ.

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯಡಿ ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಸಿಗಳನ್ನು ನಾಟಿ ಮಾಡಲು ಗುಂಡಿಗಳನ್ನು ತೆಗೆಯಲಾಗಿತ್ತು. ಆದರೆ ಸಸಿಗಳನ್ನು ತಂದು ನಾಟಿ ಮಾಡಿಲ್ಲ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುವಂತಾಗಿದೆ. ಇದಕ್ಕೆ ಹೊಣೆಗಾರರು ಯಾರು ?

ಇತ್ತೀಚಿನ ಸುದ್ದಿ

ಜಾಹೀರಾತು