4:42 PM Sunday1 - August 2021
ಬ್ರೇಕಿಂಗ್ ನ್ಯೂಸ್
ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ… ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ… ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?:… ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ… Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ…

ಇತ್ತೀಚಿನ ಸುದ್ದಿ

ಜಾರ್ಜ್ ಫ್ಲಾಯ್ಡ್‌ನ ಹತ್ಯೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಗೆ 22.6 ವರ್ಷ ಸುದೀರ್ಘ ಜೈಲು

26/06/2021, 18:47

ವಾಷಿಂಗ್‌ಟನ್: ವಿಶ್ವಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾದ ಅಮೆರಿಕದ ಜಾರ್ಜ್ ಫ್ಲಾಯ್ಡ್‌ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನ್ನಿಯಾದ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಅಲ್ಲಿನ ನ್ಯಾಯಾಲಯ 22 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಡೆರಿಕ್ ತನ್ನ ಮೊಣಕಾಲನ್ನು ಜಾರ್ಜ್‌ ಫ್ಲಾಯ್ಡ್‌‌‌ ಅವರ ಕುತ್ತಿಗೆ ಇಟ್ಟು ಹಿಂಸೆ ನೀಡಿ ಕೊಂದಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಈ ಜನಾಂಗೀಯ ಹಿಂಸಾಚಾರದ ವಿರುದ್ದ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಪ್ರಸ್ತುತ ಘೋಷಿಸಲ್ಪಟ್ಟ ಶಿಕ್ಷೆಯು, ಕಪ್ಪು ಜನಾಂಗದ ವ್ಯಕ್ತಿಯನ್ನು ಹತ್ಯೆ ಮಾಡಿದ ಪೊಲೀಸ್‌ ಅಧಿಕಾರಿಯೊಬ್ಬನಿಗೆ ವಿಧಿಸಲಾದ ಅತ್ಯಂತ ಸುದೀರ್ಘ‌ ಜೈಲು ಶಿಕ್ಷೆಯಾಗಿದೆ. ಡೆರೆಕ್‌ ಇತ್ತೀಚೆಗಷ್ಟೆ ತನ್ನ ವರ್ಷಗಳ ಮೌನವನ್ನು ಮುರಿದು, ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದನು.

ಇತ್ತೀಚಿನ ಸುದ್ದಿ

ಜಾಹೀರಾತು