9:41 PM Sunday17 - October 2021
ಬ್ರೇಕಿಂಗ್ ನ್ಯೂಸ್
ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು… ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ… ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು… ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು… ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ… ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು;… ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ… ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ… ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ;… ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ,…

ಇತ್ತೀಚಿನ ಸುದ್ದಿ

ಸರಕಾರದ ವಿಶೇಷ ಪ್ಯಾಕೇಜ್: 2.40 ಲಕ್ಷ ಕಟ್ಟಡ ಕಾರ್ಮಿಕರಿಗೆ, 86 ಸಾವಿರ ಅಸಂಘಟಿತ ಕಾರ್ಮಿಕರಿಗೆ ಇನ್ನೂ ಹಣ ಸಿಕ್ಕಿಲ್ಲ !

27/06/2021, 13:23

ಬೆಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಬಿಡುಗಡೆ ಮಾಡಿದ ವಿಶೇಷ ಪ್ಯಾಕೇಜ್ ನಲ್ಲಿ ರಾಜ್ಯದಲ್ಲಿರುವ ಸುಮಾರು 2,40,000 ಕಟ್ಟಡ ಕಾರ್ಮಿಕರು ಹಾಗೂ 86,000 ಅಸಂಘಟಿತ ಕಾರ್ಮಿಕರಿಗೆ ಇನ್ನೂ ಹಣ ವರ್ಗಾವಣೆಯಾಗಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್ ಹೇಳಿದ್ದಾರೆ.

ಲಾಕ್‌ಡೌನ್‌ ಪರಿಣಾಮವಾಗಿ ಸಂಕಷ್ಟಕ್ಕೆ ಒಳಗಾಗಿರುವ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ರಾಜ್ಯ ಸರಕಾರ ನೆರವು ಘೋಷಣೆ ಮಾಡಿತ್ತು. ಅದರಂತೆ, ರಾಜ್ಯದಲ್ಲಿ ಇರುವರೆಗೆ 17,80,000 ಕಟ್ಟಡ ಕಾರ್ಮಿಕರು ಮಂಡಳಿಯಲ್ಲಿ ನೋಂದಾಯಿತರಾಗಿದ್ದು, ಇದುವರೆಗೇ ಸುಮಾರು 15,40,000 ಕಾರ್ಮಿಕರಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ 3,000 ರೂ. ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹಣ ವರ್ಗಾವಣೆಯಾಗದೆ ಬಾಕಿ ಉಳಿದಿರುವ ಕಾರ್ಮಿಕರಲ್ಲಿ ಕೆಲವರ ಬ್ಯಾಂಕ್‌ ಖಾತೆಗಳನ್ನು ನಿಷ್ಕ್ರಿಯವಾಗಿರುತ್ತದೆ ಅಥವಾ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗಿರುವುದಿಲ್ಲ. ಕೂಡಲೇ ಸರಿಪಡಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ಅದೇ ರೀತಿಯಲ್ಲಿ 11 ವಿವಿಧ ಅಸಂಘಟಿತ ಕಾರ್ಮಿಕರಿಗೆ ಘೋಷಿಸಲಾದ ರೂ.2,000/- ನಗದು ವರ್ಗಾವಣೆಯಲ್ಲಿ ನೋಂದಾಯಿತರಾದ 3,30,000 ಕಾರ್ಮಿಕರಲ್ಲಿ 2,44,000 ಕಾರ್ಮಿಕರಿಗೆ ಸಹಾಯಧನ ವರ್ಗಾವಣೆಯಾಗಿರುತ್ತದೆ ಎಂದು ಸಚಿವ ಹೆಬ್ಬಾರ್  ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು