9:18 AM Sunday25 - July 2021
ಬ್ರೇಕಿಂಗ್ ನ್ಯೂಸ್
ಸಚಿವೆ  ಜೊಲ್ಲೆ ನಿವಾಸಕ್ಕೆ ಮೊಟ್ಟೆ ಎಸೆದ  ಎನ್ ಎಸ್ ಯುಐ ಕಾರ್ಯಕರ್ತರ ಪ್ರತಿಭಟನೆ:… ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ಮತ್ತೆ ಡೆಲ್ಟಾ ಪ್ಲಸ್ ಆತಂಕ: ಕಂಟೈನ್ಮೆಂಟ್ ಝೋನ್ ಜಾರಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಸೂಚನೆ

27/06/2021, 08:09

ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಅಬ್ಬರ ಕಡಿಮೆಯಾಗಿ ಇಡೀ ರಾಜ್ಯ ಅನ್‌ಲಾಕ್ ಆಗುತ್ತಿದ್ದಂತೆ ಮತ್ತೆ ಆತಂಕ ಎದುರಾಗಿದೆ. ಇದೀಗ ಡೆಲ್ಟಾ ಫ್ಲಸ್ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಈ ಕುರಿತು ಪತ್ರ ರವಾನಿಸಿದ್ದಾರೆ. ಡೆಲ್ಲಾ ಪ್ಲಸ್ ವೈರಸ್ ಪತ್ತೆ ಯಾಗುತ್ತಿರುವ ಕಾರಣ ಕಂಟೈನ್ಮೆಂಟ್ ಝೋನ್ ನಿರ್ಬಂಧ ಜಾರಿಗೆ ತರಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಈಗಾಗಲೇ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ವ್ಯಾಪಿಸೋ ಆತಂಕವಿದೆ‌.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ಡೆಲ್ಟಾ ಪ್ಲಸ್ ವೇರಿಯೆಂಟ್ ಅತೀ ವೇಗದಲ್ಲಿ ಹರಡುತ್ತಿದೆ. ಅಷ್ಟೇ ವೇಗದಲ್ಲಿ ಶ್ವಾಸಕೋಶಕ್ಕೆ ಅವರಿಸಿಕೊಳ್ಳುತ್ತಿದೆ. ಕೊರೋನಾ ವೈರಸ್ ಪೈಕಿ ಡೆಲ್ಟಾ ಪ್ಲಸ್ ಅತ್ಯಂತ ಅಪಾಯ ಕಾರಿ ಅನ್ನೋದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಕ್ಕೆ ಪತ್ರದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು