11:28 PM Thursday20 - January 2022
ಬ್ರೇಕಿಂಗ್ ನ್ಯೂಸ್
ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾಗಿದ್ದರೆ ವ್ಯಾಕ್ಸಿನ್ ಏಕೆ ನೀಡಬೇಕಿತ್ತು: ಸಂಸದ ಪ್ರತಾಪ್ ಸಿಂಹ… ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ… ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಸಖರಾಯಪಟ್ಟಣ ರಥೋತ್ಸವ ಆಚರಣೆ: ಅರ್ಚಕರು ಸೇರಿ 9 ಮಂದಿ ವಿರುದ್ಧ ಕೇಸ್ ಹೋಂ ಐಸೋಲೇಷನ್’ ಆಗಿರೋರಿಗೆ ಇನ್ಮುಂದೆ  ‘ಮೆಡಿಸಿನ್ ಕಿಟ್’ ವಿತರಣೆ:  ‘ಔಷಧಿಗಳ ಪಟ್ಟಿ ಹೀಗಿದೆ… ಖಾಸಗಿ ಮೆಡಿಕಲ್ ಕಾಲೇಜಿನ ಪ್ರಯೋಗ ಶಾಲೆಯೇ ಸರಕಾರಿ ವೆನ್ಲಾಕ್ ಅಸ್ಪತ್ರೆ?: ಬಡ ರೋಗಿಗಳ… ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು!: ಸಖರಾಯಪಟ್ಟಣದ ಶಕುನ ರಂಗನಾಥ ಸ್ವಾಮಿಗೆ ನಡೆಯಿತು… ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ವಾಯ್ಸ್ ಆಫ್ ಆರಾಧನ ಮಕ್ಕಳ ಸಾಂಸ್ಕೃತಿಕ ಸಂಭ್ರಮ ಕೆಮ್ಮಿದ್ರೆ ಕೊರೊನಾ ಅನ್ನೋ ಕಾಲವಿದು!; ಆದರೆ ಹೆದ್ದಾರಿ ಪ್ರಾಧಿಕಾರ 10 ಹಳ್ಳಿಗಳನ್ನೇ ಕೆಮ್ಮು… ಕಾಫಿನಾಡಿನ ಖಾಕಿಗಳಿಗೆ ಕೊರೊನಾ ಕಾಟ: 27 ಮಂದಿ ಪೊಲೀಸರಿಗೆ ಹೋಂ ಐಸೋಲೇಶನ್! ಕೋಸ್ಟಲ್ ವುಡ್ ನ ಬಹು ನಿರೀಕ್ಷಿತ ತುಳು ಚಿತ್ರ  ‘ಸರ್ಕಸ್’ ನ ಚಿತ್ರೀಕರಣ…

ಇತ್ತೀಚಿನ ಸುದ್ದಿ

ಜುಲೈ 12ರಂದು ಎಐಸಿಸಿ ಮೀಟಿಂಗ್: ಈ ಬಾರಿ ಕಾಂಗ್ರೆಸ್ ಅಧ್ಯಕ್ಷರು ಗಾಂಧಿ ಕುಟುಂಬದವರೇ? ಅಲ್ಲ, ಹೊರಗಿನವರೇ?

28/06/2021, 08:06

ನವದೆಹಲಿ(reporterkarnataka news): ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಗೆ ಮತ್ತೆ ಶಕ್ತಿ ತುಂಬುವ ಚಿಂತನೆ ಆರಂಭಗೊಂಡಿದೆ. ಜುಲೈ 12ರಂದು ಎಐಸಿಸಿ ಸಭೆ ನಡೆಯಲಿದೆ. ಪಕ್ಷದ ನೂತನ ಅಧ್ಯಕ್ಷರನ್ನು ಗಾಂಧಿ ಕುಟುಂಬದಿಂದಲೇ ಆಯ್ಕೆ ಮಾಡಿದರೆ ಪ್ರಿಯಾಂಕಾ ಗಾಂಧಿ ಅವರನ್ನು ಹಾಗೂ

ಗಾಂಧಿ ಕುಟುಂಬದಿಂದ ಹೊರಗಿನವರನ್ನು ಆಯ್ಕೆ ಮಾಡಿದರೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಗೆ ಪ್ರಸ್ತುತ ಫುಲ್ ಟೈಮ್ ಅಧ್ಯಕ್ಷರಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋತ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದರು. ಇವರ ಬಳಿಕ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಾವಧಿ ಅಧ್ಯಕ್ಷರ ನೇಮಕ ಆಗುವವರೆಗೂ ಸೋನಿಯಾ ಗಾಂಧಿಯವರೇ ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಸ್ಪಷ್ಟಪಡಿಸಿತ್ತು. 

ಈ ನಡುವೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಗೆ ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಅಭಿಪ್ರಾಯವನ್ನು ರಾಹುಲ್ ವ್ಯಕ್ತಪಡಿಸಿದರು. ಪ್ರಿಯಾಂಕಾ ಕೂಡ ಅದಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು.

‘ಇಂಡಿಯಾ ಟುಮಾರೋ: ಭಾರತದ ಮುಂದಿನ ತಲೆಮಾರಿನ ರಾಜಕೀಯ ನಾಯಕರ ಜೊತೆಗಿನ ಮಾತುಕತೆ’ ಎಂಬ ಪುಸ್ತಕಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕಾ ಗಾಂಧಿ, “ನಮ್ಮ ಕುಟುಂಬದ ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಕಾಂಗ್ರೆಸ್ ಪಕ್ಷ ತನ್ನದೇ ದಾರಿಯಲ್ಲಿ ಸಾಗಬೇಕು. ಅದಕ್ಕೆ ನಮ್ಮ ಕುಟುಂಬಕ್ಕೆ ಸೇರಿರದ ವ್ಯಕ್ತಿ ಅಧ್ಯಕ್ಷರಾಗಬೇಕು ಎಂದು ನನಗೆ ಅನಿಸುತ್ತದೆ ಎಂದು ಹೇಳಿದ್ದರು.

ಸಂದರ್ಶನದಲ್ಲಿ ಮತ್ತಷ್ಟು ಮಾತನಾಡಿದ್ದ ಪ್ರಿಯಾಂಕಾ ಅವರು, ಗಾಂಧಿ ಕುಟುಂಬಕ್ಕೆ ಸೇರಿಲ್ಲದ ವ್ಯಕ್ತಿಯನ್ನು ನಾವು ನಮ್ಮ ನಾಯಕ ಎಂದು ಒಪ್ಪಿಕೊಳ್ಳಲು ಸಿದ್ಧರಿದ್ದೇವೆ. ಒಂದು ವೇಳೆ ನಮ್ಮ ಪಕ್ಷದ ಅಧ್ಯಕ್ಷರಾಗುವವರು ‘ನೀನು ಉತ್ತರ ಪ್ರದೇಶದ ಜವಾಬ್ದಾರಿ ತೆಗೆದುಕೊಳ್ಳುವುದು ಬೇಡ, ಅಂಡಮಾನ್ ನಿಕೋಬಾರ್ ಗೆ ಹೋಗು’ ಎಂದು ಹೇಳಿದರೂ ನಾನು ಸ್ವೀಕರಿಸಲು ಸಿದ್ಧಳಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರು ಯಾರೇ ಆದರೂ ಅವರ ಆದೇಶವನ್ನು ನಾನು ಖಂಡಿತ ಪಾಲಿಸುತ್ತೇನೆ ಎಂದು ನುಡಿದಿದ್ದರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಸೂಕ್ತ ನಾಯಕ ಎಂದು ಕೊನೆದಾಗಿ ಪ್ರಿಯಾಂಕಾ ಹೇಳಿದ್ದರು.

ಗಾಂಧಿ ಕುಟುಂಬ ಸಿದ್ದರಾಮಯ್ಯ ಅವರನ್ನು ಮುಂದಿನ ಅಧ್ಯಕ್ಷರನ್ನಾಗಿ ಮಾಡುವಲ್ಲಿ ಉತ್ಸುಕವಾಗಿದೆ ಎನ್ನಲಾಗಿದೆ. ಆದರೆ ಅವರು ಮೂಲ ಕಾಂಗ್ರೆಸಿಗರಲ್ಲ ಎಂಬ ವಿರೋಧ ಪಕ್ಷದೊಳಗೆ ಈಗಾಗಲೇ ವ್ಯಕ್ತವಾಗಿದೆ. ಅದಲ್ಲದೆ ಉತ್ತರ ಭಾರತದ ಜನರು ದಕ್ಷಿಣ ಭಾರತದ ನಾಯಕರನ್ನು ಸುಲಭದಲ್ಲಿ ಒಪ್ಪಿಕೊಳ್ಳುವುದಿಲ್ಲ. ಇದಕ್ಕೆ ಮುಖ್ಯ ಕಾರಣ ಹಿಂದಿ ಭಾಷೆ ಮೇಲೆ ಹಿಡಿತ ಇಲ್ಲದಿರುವುದು. ಕಾಂಗ್ರೆಸ್ ನಲ್ಲಿ ಇರಲಿ, ಬಿಜೆಪಿಯಲ್ಲಿ ಇರಲಿ ದಕ್ಷಿಣ ಭಾರತದ ನಾಯಕರು ರಾಷ್ಟ್ರ ರಾಜಕಾರಣದಲ್ಲಿ ಮಿಂಚದಿರಲು ಇದೇ ಮುಖ್ಯ ಕಾರಣವಾಗಿದೆ.

ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ಉಸ್ತುವಾರಿಯ ಜತೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಕಾಂಗ್ರೆಸ್ ನಾಯಕತ್ವವನ್ನು ವಿರೋಧಿಸಿ ಪತ್ರ ಬರೆದಿದ್ದ ಮುಖಂಡ ಮುಕುಲ್ ವಾಸ್ನಿಕ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೊತೆಗೆ ಮಧ್ಯಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿತ್ತು.

ಕಾಂಗ್ರೆಸ್ ಅಧ್ಯಕ್ಷೆಗೆ ಸಂಘಟನೆ ಮತ್ತು ಕಾರ್ಯನಿರ್ವಹಣೆಯಲ್ಲಿ ಸಹಾಯ ಮಾಡುವ ಆರು ಸದಸ್ಯರಲ್ಲಿ ವಾಸ್ನಿಕ್ ಸಹಿತ ಎಕೆ ಆ್ಯಂಟನಿ, ಅಹ್ಮದ್ ಪಟೇಲ್, ಅಂಬಿಕಾ ಸೋನಿ, ಕೆ.ಸಿ.ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದ್ದಾರೆ. ರಣದೀಪ್ ಸುರ್ಜೆವಾಲಾರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯ ಜೊತೆಗೆ ಕರ್ನಾಟಕದ ಉಸ್ತುವಾರಿಯಾಗಿಯೂ ನೇಮಿಸಲಾಗಿತ್ತು.

ಕಾಂಗ್ರೆಸ್ ಕೇಂದ್ರೀಯ ಚುನಾವಣಾ ಪ್ರಾಧಿಕಾರಕ್ಕೆ ಕೃಷ್ಣ ಭೈರೇಗೌಡ ಅವರನ್ನು ನೇಮಿಸಲಾಗಿತ್ತು. ಇದೇ ವೇಳೆ ಕಾಂಗ್ರೆಸಿನ ಸಾಂಸ್ಥಿಕ ಹಾಗೂ ಕಾರ್ಯನಿರ್ವಹಣಾ ವಿಷಯಗಳಲ್ಲಿ ನೆರವಾಗಲು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರು ಮಂದಿ ಸದಸ್ಯರ ವಿಶೇಷ ಸಮಿತಿಯನ್ನು ನೇಮಕ ಮಾಡಿದ್ದರು. ಇದರಲ್ಲಿ ಎ.ಕೆ. ಆ್ಯಂಟನಿ, ಅಂಬಿಕಾ ಸೋನಿ, ಕೆ.ಸಿ. ವೇಣಿಗೋಪಾಲ್, ಮುಕುಲ್ ವಾಸ್ನಿಕ್ ಹಾಗೂ ರಣದೀಪ್ಸಿಂಗ್ ಸುರ್ಜೆವಾಲಾ ಸಮಿತಿಯ ಸದಸ್ಯರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು