9:17 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಲಿಂಗಸುಗೂರು: ಕಂದಾಯ ದಿನಾಚರಣೆಯಲ್ಲಿ ಹಸಿರೋತ್ಸವ ಸಂಭ್ರಮ

02/07/2021, 17:44

ಅಮರೇಶ್ ಲಿಂಗಸುಗೂರು

info.reporterkarnataka@gmail.com

ಲಿಂಗಸೂಗುರು ಮಿನಿ ವಿಧಾನಸೌಧದಲ್ಲಿ ತಾಲೂಕು ಕಂದಾಯ ಇಲಾಖೆ ವತಿಯಿಂದ ಕಂದಾಯ ದಿನಾಚರಣೆ 2021ನ್ನು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಈ ಬಾರಿ ವಿಶೇಷವಾಗಿ ‘ಹಸಿರೋತ್ಸವ’ ಎಂಬ ಧ್ಯೇಯ ವಾಕ್ಯದ ಸಂಕಲ್ಪದೊಂದಿಗೆ ಸಸಿ ನೆಟ್ಟು ನೀರು ಹಾಕುವ ಮೂಲಕ ಅರ್ಥ ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ದೇಶಿಸಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ,ಕಂದಾಯ ಇಲಾಖೆ ಅಂತ ಹೆಸರು ಬರೊದಕ್ಕೆ ಮೂಲ ಕಾರಣ ಇಲಾಖೆಯಿಂದ ಆದಾಯ ಬರುತ್ತಿತ್ತು. ಹಾಗಾಗಿ ಕಂದಾಯ ಇಲಾಖೆ ಅಂತ ಕರೆದರು. ಆದರೆ ಅದು ಇಂದು ಮಹತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದ ಕುರಿತು ತಹಶೀಲ್ದಾರ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಂಗಸೂಗೂರು ಉಪವಿಭಾಗದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಗ್ರೆಡ್ 2 ತಹಶೀಲ್ದಾರ್ ಬಿ.ಜಿ.ಜಳಕಿಮಠ, ಗುರುಗುಂಟಾ ಉಪ ತಹಶೀಲ್ದಾರ್ ರಂಗಪ್ಪ ನಾಯಕ ,ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ತಾಲ್ಲೂಕು ಅಧ್ಯಕ್ಷ ಅಮರೇಶ ರಾಠೋಡ್  ಸೇರಿದಂತೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು