9:03 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ವಾಹನಗಳ ನಂಬರ್ ಪ್ಲೇಟ್ ಮೇಲ್ಬಾಗ ಯಾವುದೇ ನಾಮಫಲಕ,  ಹೆಸರು ಬರೆಸಿದರೆ ಕಾನೂನು ಕ್ರಮ ಗ್ಯಾರಂಟಿ

02/07/2021, 07:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ಯಾವುದೇ ತರಹದ ನಾಮಫಲಕ ಮತ್ತು ಹೆಸರುಗಳನ್ನು ಹಾಕಬಾರದೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ  ಎಚ್. ಹನುಮಂತರಾಯಪ್ಪ ಹೇಳಿದ್ದಾರೆ.

ನಾಗಮಂಗಲದ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾಗಮಂಗಲ ತಾಲೂಕು ಹಾಗೂ ಕೆ.ಆರ್. ಪೇಟೆ ತಾಲ್ಲೂಕುಗಳಲ್ಲಿ ಸಾರ್ವಜನಿಕರು  ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ನಾಮಫಲಕಗಳನ್ನು ಹಾಕಿಕೊಂಡಿದ್ದಾರೆ. ಇದರ ಬಗ್ಗೆ
ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು.ಕಾನೂನು ಪ್ರಕಾರ ” ಜಿ “ಶ್ರೇಣಿಯ ವಾಹನಗಳನ್ನು ಬಿಟ್ಟು ಸಂಘ ಸಂಸ್ಥೆಗಳು, ಒಕ್ಕೂಟಗಳು  ಅಥವಾ ಇನ್ಯಾವುದೇ ಸಂಸ್ಥೆಗಳು ಹೆಸರೂ ಬರೆಯುವಂತಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಈಗಾಗಲೇ ಆದೇಶ ನೀಡಿದ್ದು, ಈಗಾಗಲೇ ಸಾರಿಗೆ ಕಚೇರಿಯಿಂದ ವಾಹನಗಳ ತಪಾಸಣಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಆದೇಶವನ್ನು ಉಲ್ಲಂಘಿಸಿದ್ದಾರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ .

ಇಲಾಖೆ ಅಧಿಕಾರಿಯಾದ ಟಿ.ಎಸ್. ಗಿರಿಧರ್,   ಸಾರಿಗೆ ಇಲಾಖೆಯ ಅಧೀಕ್ಷಕ ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು