9:41 AM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ಪಶ್ಚಿಮವಾಹಿನಿ ಯೋಜನೆ: ಕೃಷಿ ಹಾಗೂ ಕುಡಿಯುವ ನೀರಿಗೆ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣ

03/07/2021, 22:10

ಮಂಗಳೂರು(reporterkarnataka news): ಪಶ್ಚಿಮವಾಹಿನಿ ಯೋಜನೆಯಡಿ 35ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಆ ಯೋಜನೆಯಿಂದ ಕುಡಿಯಲು ಹಾಗೂ ಕೃಷಿಗೆ ನೀರು ಪೂರೈಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ. ಸಿ. ಮಧುಸ್ವಾಮಿ  ಹೇಳಿದರು.

ಅವರು ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ  ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಕೈಗೊಳ್ಳಲಾದ ವಿವಿಧ ಯೋಜನೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ನುಡಿದರು.

ಇಲಾಖೆಯಡಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕರೆಯಲಾದ ಟೆಂಡರುಗಳನ್ನು ಬೇಗ ಅನುಮತಿ ನೀಡಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳ ಮಾಸ್ಟರ್ ಪ್ಲಾನ್ ಅನ್ನು ಸಂಬಂಧಿಸಿದ ಶಾಸಕರ ಗಮನಕ್ಕೆ ತರಲಾಗುವುದು. ಶಾಸಕರು ಸೂಚಿಸುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜೇಶ್ ನಾಯ್ಕ್, ಯು.ಟಿ. ಖಾದರ್, ಸಂಜೀವ ಮಠಂದೂರು, ಭರತ್ ಶೆಟ್ಟಿ, ಇಲಾಖೆಯ ಕಾರ್ಯದರ್ಶಿಗಳಾದ ಮೃತ್ಯುಂಜಯ ಸ್ವಾಮಿ, ಇಲಾಖೆಯ ಮೈಸೂರು ವೃತ್ತದ ಎಸ್ ಸಿ ರಾಜಶೇಖರ ಯಡಳ್ಳಿ, ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಗೋಕುಲದಾಸ್,  ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ವಿಷ್ಣು ಕಾಮತ್, ಸಿಬ್ಬಂದಿಗಳಾದ ಶಿವ ಪ್ರಸನ್ನ, ರಾಕೇಶ್, ಆನಂದ್, ಲವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು