5:21 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಕೋಲಾರ: ತೈಲ ಬೆಲೆಯೇರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ಜಾಥಾ

08/07/2021, 11:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ಪಟ್ರೋಲ್ , ಡೀಸೆಲ್ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಳ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಸೈಕಲ್ ಜಾಥಾ ನಡೆಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳನ್ನು ಪ್ರತಿಭಟಿಸಿದರು . ನಗರದ ಕಾಂಗ್ರೆಸ್ ಕಚೇರಿ ಮುಂದೆ ಸೈಕಲ್ ಜಾಥಾಗೆ ಚಾಲನೆ ನೀಡಿದ ಮಾಜಿ ಸಭಾಪತಿ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ವಿ.ಆರ್ . ಸುದರ್ಶನ್ ಮಾತನಾಡಿ, ತೈಲ ಬೆಲೆ ಇಳಿಸಿ ಜನಸಾಮಾನ್ಯರ ಮೇಲಿನ ಹೊರೆ ಇಳಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು 

ತೈಲ ಮೇಲೆ ಹಾಕಿರುವ ತೆರಿಗೆ ಇಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು. 

ದೇಶದಲ್ಲಿ ನಡೆಯುತ್ತಿರುವ ಆಡಳಿತದ 

ದುರವಸ್ಥೆಯಿಂದ, ಜನಸಾಮಾನ್ಯರು , ರೈತರು ತತ್ತರಿಸಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರದ ಕಾರ್ಯ ವೈಖರಿ ದುರಾಡಳಿತದಿಂದ ಕೂಡಿದೆ . ಕೋವಿಡ್ ಲಾಕ್ ಡೌನ್ ಹೇರಿದ ಸರ್ಕಾರ ಕಷ್ಟದಲ್ಲಿ ಜನರ ನೆರವಿಗೆ ಧಾವಿಸುವ ಕೆಲಸ ಮಾಡಲಿಲ್ಲ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಮಾತನಾಡಿ , ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಧನ , ಅನಿಲ ಬೆಲೆ ಏರಿಸಿ ಬಡವರು , ಜನಸಾಮಾನ್ಯರ ಪಾಲಿಗೆ ಮಾರಕ ನಡೆ ಪ್ರದರ್ಶಿದೆ . ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತ ವಿರೋಧಿಸಿ ಕಾಂಗ್ರೆಸ್ ಪಕ್ಷ ಜನ ಜಾಗೃತಿಗಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದೆ ಎಂದರು .

ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ , ಕೇಂದ್ರ ಸರ್ಕಾರ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ಕೆಲಸ ಮಾಡದೆ ಯುವಕರ , ರೈತರ , ಜನ ಸಾಮಾನ್ಯರ ವಿರೋಧಿ ನೀತಿ ಅನುಸರಿಸುತ್ತಿದೆ . ಪೆಟ್ರೋಲ್ ಏರಿಕೆಯಾಗಿದೆ . ದರ ಏರಿಕೆ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು

ಮುಂಬರುವ ಜಿಪಂ , ತಾಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯುತ್ತೇವೆ . ಜಿಪಂ ಯ ೩೩ ಸ್ಥಾನಗಳಲ್ಲಿ ೨೫ ಸ್ಥಾನ ಕಾಂಗ್ರೆಸ್ ವಶಪಡಿಸಿಕೊಳ್ಳುತ್ತದೆ . ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ವಕ್ತಾರ ಎಲ್.ಎ.ಮಂಜುನಾಥ್ , ಪಕ್ಷದ ಉಸ್ತುವಾರಿಗಳಾದ ಮಲಜಮ್ಮ , ಕಾಂಚೇಗೌಡ , ಮದನ್ ಪಾಟೀಲ್ , ಕಾರ್ಯದರ್ಶಿ ಬಲರಾಮ್ , ಊರುಬಾಗಿಲು ಶ್ರೀನಿವಾಸ್ , ಸ್ಯಾಂಡ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು , ಕೆಪಿಸಿಸಿ ಓಬಿಸಿ ಕಾರ್ಯದರ್ಶಿ ಎನ್.ಮಂಜುನಾಥ್ , ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್ , ಮಾವು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ , ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ , ಆಪ್ ಕಾಮ್ ಮಾಜಿ ಅಧ್ಯಕ್ಷ ಗೋಪಾಲ ಗೌಡ , ಮುಖಂಡರಾದ ಉದಯಕುಮಾರ್ , ಕುಮಾರ್ , ಸೀತಿ ಮುರಳಿ ಮುಂತಾದವರು ಪಾಲ್ಗೊಂಡಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು