3:40 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಬಡವರಿಗೆ ನೀಡಿದ ಜಮೀನಿನ ಮೇಲೆ ಹೈಕೋರ್ಟ್ ನಲ್ಲಿ  ಹೂಡಿರುವ ಮೇಲ್ಮನವಿ ಹಿಂಪಡೆಯಿರಿ: ಅಧಿಕಾರಿಗಳಿಗೆ ಉಸ್ತುವಾರಿ ಸಚಿವರ ಸೂಚನೆ

13/07/2021, 08:42

ಮಂಗಳೂರು(reporterkarnataka news): ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳೀಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಹೈಕೋರ್ಟ್ ನಲ್ಲಿ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ಅವರು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೆಳ್ತಂಗಡಿ ತಾಲೂಕು ಇಂದಬೆಟ್ಟು – ಕಡಿರುದ್ಯಾವರ ಎಂಬಲ್ಲಿ ಕಂದಾಯ ಇಲಾಖೆಯವರು ಜಂಟಿ ಸಮೀಕ್ಷೆ ನಡೆಸಿ, ಅದು ಕಂದಾಯ ಜಮೀನು ಎಂದು ಅದನ್ನು ಐದು ಕುಟುಂಬಗಳಿಗೆ ನೀಡಿದ್ದರು, ಆದರೆ, ಅದನ್ನು ಪ್ರಶ್ನಿಸಿ ಅರಣ್ಯ ಇಲಾಖೆಯವರು ಇಲಾಖೆ ಹೈಕೋಟ್ರ್ನಲ್ಲಿ  ಮೇಲ್ಮನವಿ ಸಲ್ಲಿಸಿದ್ದಾರೆ, ಈ ಮೇಲ್ಮನವಿಯನ್ನು ಹಿಂಪಡೆದು, ಆ ಬಡ ಕುಟುಂಬಗಳು ಜೀವನ ನಡೆಸಲು ಅನುಕೂಲ ಮಾಡಿಕೊಡುವಂತೆ ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್ ಅವರಿಗೆ ಸೂಚಿಸಿದ ಸಚಿವರು, ಇದು ಕೆಡಿಪಿ ಸಭೆಯ ನಿರ್ಣಯ ಕೂಡ ಆಗಿದೆ ಎಂದರು.
ಲಿಡ್ಕರ್ ಇಲಾಖೆಯಡಿ ಚರ್ಮದ ಸಹಾಯಧನ ನೀಡುವ ನೇರ ಸಾಲ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು, ಅಲ್ಲಿನ ಯೋಜನೆಗಳ ಅನುಷ್ಠಾನ ಶ್ರಮವಹಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಸರ್ಕಾರದ ಆದೇಶದಂತೆ ಜಿಲ್ಲೆಗೊಂದು ಗೋಶಾಲೆ ತೆರೆಯಲು ಕನಿಷ್ಠ 25 ಎಕರೆ ಪ್ರದೇಶವನ್ನು ಗುರುತಿಸಬೇಕಾಗಿದೆ, ಈ ಕಾರ್ಯವನ್ನು ಆದ್ಯತೆ ಮೇರೆಗೆ ಮಾಡುವಂತೆ ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಿಗೆ ಆದೇಶ ನೀಡಿದರು. 

ಮೂಲನಿವಾಸಿ ಕೊರಗ ಸಮುದಾಯದವರು ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕುಗಳ ಫಲಾನುಭವಿಗಳು ಘಟಕವೆಚ್ಚದಡಿ 151 ಮನೆಗಳನ್ನು ನಿರ್ಮಿಸಿಕೊಂಡಿದ್ದರು,  ಅವುಗಳೀಗ ತೀರಾ ಶೀಥಿಲಗೊಂಡಿದ್ದು, ವಾಸಕ್ಕೆ ಅನಾನುಕೂಲವಾಗಿವೆ, ಆದಕಾರಣ ಅವರಿಗೆ 3.50 ಲಕ್ಷ ರೂ.ಗಳ ಘಟಕ ವೆಚ್ಚದಲ್ಲಿ ಹೊಸ ಮನೆಗಳನ್ನು ನಿರ್ಮಾಣ ಮಾಡಿಕೊಡಲು ಅನುಮತಿ ಹಾಗೂ ಅನುದಾನ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸೂಚಿಸಿದರು. 
ಇದೇ ತಿಂಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಅದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ, 179 ಪರೀಕ್ಷಾ ಕೇಂದ್ರಗಳು ಸಿದ್ದಗೊಂಡಿವೆ, ವಿದ್ಯಾರ್ಥಿಗಳ ಪೋಷಕರೊಂದಿಗೆ ಈಗಾಗಲೇ ದೂರವಾಣಿ ಕರೆ ಮಾಡಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ,  ಇದೇ ಶನಿವಾರದೊಳಗೆ ತಪಾಸಣೆ ಮಾಡಿಸಿಕೊಂಡ ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಲ್ಲೀ, ಅವರನ್ನು ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ,  ಕೇರಳದಿಂದ ಬರುವ ನಾನು 441 ವಿದ್ಯಾರ್ಥಿಗಳ ಪೈಕಿ 121 ವಿದ್ಯಾರ್ಥಿಗಳು ತಲಪಾಡಿಗೆ ಬರಲಿದ್ದಾರೆ, ಅಲ್ಲಿಂದ ಅವರಿಗೆ ಖಾಸಗಿ ಶಾಲೆಗಳ ಬಸ್‍ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಸ್ಕೌಟ್ಸ್ ಅಂಡ್ ಗೈಡ್ಸ್ ನವರು 33 ಸಾವಿರ ಮಾಸ್ಕ್ ಗಳನ್ನು ನೀಡಿದ್ದಾರೆ ಎಂದು ಡಿಡಿಪಿಐ ಮಲ್ಲೇ ಸ್ವಾಮಿ ಸಭೆಗೆ ಮಾಹಿತಿ ನೀಡಿದರು. 

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಲು ಅಣಕು ಪ್ರಶ್ನೆಪತ್ರಿಕೆಗಳನ್ನು ನೀಡಿ, ಆ ಮೂಲಕ ಅವರಿಗೆ ಪರೀಕ್ಷೆಗೆ ತಾಲೀಮು ನೀಡುವಂತೆ ಸೂಚಿಸಿದರು. 
 ಜಿಲ್ಲೆಯ ನೋಂದಣಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬ್ಯಾಂಕುಗಳಲ್ಲಿರುವಂತೆ ಟೋಕನ್ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವುದು ಉತ್ತಮ, ಸಂಬಂಧಿಸಿದವರು ನೋಂದಣಿ ಕಚೇರಿಗೆ ಬಂದಾಗ ಅವರಿಗೆ ಅವರ ಪಾಳಿಯ ಟೋಕನ್ ನೀಡಿದ್ದಲ್ಲೀ ಆ ವೇಳೆಯನ್ನು ಅವರು ಇತರೆ ಕೆಲಸಗಳಿಗೆ ಬಳಸಿಕೊಳ್ಳಬಹುದು, ಈ ಬಗ್ಗೆ ಉತ್ತಮವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಿದ್ದಲ್ಲೀ, ಸಿಎಸ್‍ಆರ್ ನಿಧಿಯಡಿ ಅನುಮೋದನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಗ್ರಾಮಗಳಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ತಾಲೂಕಿನ 5 ಗ್ರಾಮಗಳಲ್ಲಿ ತ್ಯಾಜ್ಯ ಘಟಕಗಳನ್ನು ನಿರ್ಮಿಸಿ, ಬೇರ್ಪಡಿಸಿದ ತ್ಯಾಜ್ಯದ ವಿಲೇವಾರಿ ಹಾಗೂ ಮರುಬಳಕೆ ಬಗ್ಗೆ ಅಗತ್ಯ ಕ್ರಮವಹಿಸಬೇಕು ಎಂದು ಸಚಿವರು ತಿಳಿಸಿದರು. 
ಕೋವಿಡ್-19 ಸೋಂಕಿನ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ, ಆದ ಕಾರಣ ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದಲೂ ರೋಗಿಗಳು ಇಲ್ಲಿನ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರು, ಕೊರೊನಾ ಸೇರಿದಂತೆ ಬ್ಲಾಕ್ ಫಂಗಸ್‍ಗೂ ಕೂಡ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ, ಈ ಚಿಕಿತ್ಸೆಯಲ್ಲಿ ಖಾಸಗಿ ಆಸ್ಪತ್ರೆಗಳು ಹಾಗೂ ನಸಿರ್ಂಗ್ ಹೋಮ್‍ಗಳು ಹೆಚ್ಚಿನ ಶುಲ್ಕ ವಿಧಿಸಿದ್ದಲ್ಲೀ ಆ ಬಗ್ಗೆ ದೂರು ನೀಡಿದರೆ, ಸಂಬಂಧಿಸಿದ ಆಸ್ಪತ್ರೆಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದರು. 
ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅಡಿಕೆ ಬೆಳೆಗೆ ಹಳದಿ ರೋಗ ಹೆಚ್ಚಾಗಿ ಕಂಡು ಬರುತ್ತದೆ. ತೋಟಗಾರಿಕೆ ಇಲಾಖೆಗಳು ರೈತರನ್ನು ಸಂಪರ್ಕಿಸಿ, ಆ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸೂಚಿಸಿದರು.
ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಮಾತನಾಡಿದರು. 
ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಸಂಜೀವ ಮಠಂದೂರು, ರಾಜೇಶ್ ನಾಯಕ್, ವಿಧಾನಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್, ಬೋಜಗೌಡ ಮಾತನಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು