8:37 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ವ್ಯಾಕ್ಸಿನ್ ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ; ಪ್ರಧಾನಿ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವೇ: ಸಿದ್ದರಾಮಯ್ಯ ಪ್ರಶ್ನೆ

14/07/2021, 21:15

ಬೆಂಗಳೂರು(reporterkarnatakanews): ಪ್ರಧಾನಿ ಮೋದಿ ಅವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ.50ರಷ್ಟು ಲಸಿಕೆ ಕೇಂದ್ರಗಳು ಲಸಿಕೆ ಕೊರತೆಯಿಂದಾಗಿ ಸ್ಥಗಿತಗೊಂಡಿವೆ ಎಂದು ಆರೋಪಿಸಿದ್ದಾರೆ.

ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂದು ವರದಿಯಾಗಿದೆ.ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ಪ್ರತಿ 100 ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ.ಬೇಡಿಕೆಯ ಶೇ. 20ರಷ್ಟು ಲಸಿಕೆ ಕೂಡ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಜ್ಯ ಸರಕಾರ ಲಸಿಕೆ ಪೂರೈಸುವಂತೆ 10ಕ್ಕಿಂತ ಹೆಚ್ಚು ಪತ್ರಗಳನ್ನು ಕೇಂದ್ರ ಸರಕಾರಕ್ಕೆ ಬರೆದಿದ್ದರೂ ಕೇಂದ್ರ ಸ್ಪಂದಿಸುತ್ತಿಲ್ಲ.ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ.ಲಭ್ಯವಿರುವ ಲಸಿಕೆಗಳನ್ನು ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ ಎಂದು ಅವರು ನುಡಿದರು.

ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ನಿರಾಸೆಯಿಂದ ವಾಪಸ್ ಹೋಗುತ್ತಿದ್ದಾರೆ. ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.ಎರಡು ಡೋಸ್ ಗಳಂತೆ ಒಟ್ಟು 9.6 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು