8:57 PM Saturday1 - October 2022
ಬ್ರೇಕಿಂಗ್ ನ್ಯೂಸ್
ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ… ಹರೇಕಳ ಸೇತುವೆ ಸಾರ್ವಜನಿಕ ಸಂಚಾರಕ್ಕೆ  ಮುಕ್ತಗೊಳಿಸಿ: ಡಿವೈಎಫ್ಐ ಒತ್ತಾಯ  ಲಂಚ ಪ್ರಕರಣ: ಮಂಗಳೂರು ತಹಶೀಲ್ದಾರ್ ಪುರಂದರ ಹೆಗ್ಡೆ, ಸಹಾಯಕ ಅಧಿಕಾರಿ ಶಿವಾನಂದ ಲೋಕಾಯುಕ್ತ… ಭೂತಾನ್ ನಿಂದ 17 ಸಾವಿರ ಟನ್  ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ… ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ:  ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ ಶಾಸಕ ರಘುಪತಿ ಭಟ್ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ: ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ… ದ.ಕ. ಜಿಲ್ಲೆ: ನಿಷೇಧಿತ ಸಂಘಟನೆಗಳ ವಿವಿಧಡೆಯ ಕಚೇರಿಗಳ ಮೇಲೆ ದಾಳಿ; ಸ್ವತ್ತುಗಳು ವಶಕ್ಕೆ ಮೂಡಿಗೆರೆ: ತರುವೆ ಗ್ರಾಪಂ, ಅಂಗನವಾಡಿ, ಲೈಬ್ರರಿಗೆ ನುಗ್ಗಿದ ಕಳ್ಳರು: ಫೈಲ್, ಲ್ಯಾಪ್ ಟಾಪ್… ಗರ್ಭಪಾತ ಮಹಿಳೆಯರ ಹಕ್ಕು: ಅವಿವಾಹಿತ ಮಹಿಳೆಯರಿಗೂ ಗರ್ಭಪಾತ ಮಾಡಬಹುದು ಸುಪ್ರಿಂಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ…

ಇತ್ತೀಚಿನ ಸುದ್ದಿ

ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಖಡಕ್ ಎಚ್ಚರಿಕೆ

15/07/2021, 08:15

ಮಂಗಳೂರು (reporterkarnataka news): ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ – ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. 
ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು, ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು, ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು, ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಸ ವಿಂಗಡಣೆ ಸರಿಯಾದ ಕ್ರಮದಲ್ಲಿ ಆಗದಿರುವ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತಿವೆ, ಹಾಗಾಗಿ ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು, ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲೂ ಸೂಕ್ತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.
ನಗರದ ಫುಟ್‍ಪಾತ್‍ಗಳಲ್ಲಿರುವ ಪೆಟ್ ಶಾಪ್‍ಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಅವುಗಳು ನೋಂದಣಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು, ನೋಂದಣಿ ಆಗದ ಪೆಟ್ ಶಾಪ್‍ಗಳ ವಿರುದ್ಧ ಕಾನುನು ಬದ್ದ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ನಗರದ ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಪ್ರಾಣಿದಯಾ ಸಂಘದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು