9:20 PM Sunday17 - October 2021
ಬ್ರೇಕಿಂಗ್ ನ್ಯೂಸ್
ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು… ಕಾರ್ಕಳ ಪಳ್ಳಿಯಲ್ಲಿ ದೇಶೀ ತಳಿಯ ಗೋವು ನಾಪತ್ತೆ; ದನ ಕಳ್ಳತನ ಶಂಕೆ; ಪ್ರಕರಣ… ಇನ್ನು ಮುಂದೆ ಭಾನುವಾರವೂ ಶಾಲೆ? : ಇದೆಲ್ಲ ಯಾಕೆ ಗೊತ್ತೇ?  ಶಿಕ್ಷಣ ಸಚಿವರು ಏನು… ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು… ಎಂಡೋಸಲ್ಫಾನ್ ಪೀಡಿತ ಯುವಕನ ಮೇಲೆ ಅತ್ಯಾಚಾರ ಆರೋಪ: ಪುತ್ತೂರು ನಗರ ಠಾಣೆ ಪೊಲೀಸರಿಂದ… ಮಂಗಳೂರು ದಸರಾ ಮುಗಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ: ಇಬ್ಬರ ದಾರುಣ ಸಾವು;… ಕಾರ್ಕಳ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ತಮ್ಮನಿಗೆ ಕರೆ ಮಾಡಿದ್ದ ಆಕೆ… ಅಥಣಿ: ಕೃಷ್ಣಾ ನದಿ ಪ್ರವಾಹ ಸಂತ್ರಸ್ತರಿಗೆ ಈಗ ಮೊಸಳೆ, ವಿಷ ಜಂತುಗಳ ಕಾಟ: ಇನ್ನೂ… ವಸತಿ ಶಾಲೆಯ ಗಣಿತ ಶಿಕ್ಷಕನ ಕಾಮದಾಟ: ಅಪ್ರಾಪ್ತ ವಿದ್ಯಾರ್ಥಿನಿಯರ ಜತೆ ಅಶ್ಲೀಲ ವರ್ತನೆ;… ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಹರಿದು ಬಂದ ಭಕ್ತಸಾಗರ; ಶಾರದೆ,…

ಇತ್ತೀಚಿನ ಸುದ್ದಿ

ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ

16/07/2021, 18:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ ರೈತರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಸರಿಯಾಗಿ ರಸ ಗೊಬ್ಬರಗಳು, ಬಿತ್ತನೆಯ ಬೀಜಗಳು ದೊರೆಯುತ್ತಿಲ್ಲ. ರಸ ಗೊಬ್ಬರಗಳನ್ನು ಎಂಆರಪಿ ದರಕ್ಕಿಂತ ಹೆಚ್ಚಿಗೆ ನೀಡುವುದು ಕಂಡು ಬಂದಿದೆ. ಸಂಬರಗಿ ಗ್ರಾಮದಲ್ಲಿ ಪ್ರಿಯ ವೈನ್ಸ್ ತೆರವು ಮಾಡಲು ರೈತ ಮುಖಂಡರು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರು ಸೇರಿ ಸುಮಾರು 1 ತಿಂಗಳಿಂದ ಶ್ರಮ ಪಟ್ಟು ಬೇಕಾದ ದಾಖಲಾತಿಗಳನ್ನು ಸಂಬಂಧ ಪಟ್ಟ ಅಧಿಖಾರಿಗಳಿಗೆ ಕೊಟ್ಟಿದ್ದು ಕೂಡಲೇ ವೈನ್ಸ್ ಶಾಪ್ ನ್ನ್ ತೆರವು ಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿರುವ ಎಲ್ಲ ರೈತರು ಸೇರಿ ಹೋರಾಟಕ್ಕೆ ಇಳಿವುದಾಗಿ ಎಚ್ಚರಿಕೆ ಕೊಟ್ಟರು.

ರೈತರು ಯಾವುದೇ ಜಾತಿ, ಭಾಷೆ, ಧರ್ಮ, ಶ್ರೀಮಂತ-ಬಡವ ಎಂಬ ಬೇಧ ಮಾಡದೇ ಒಗ್ಗಟ್ಟಾಗಿರಲು ಅವರು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು