4:16 AM Wednesday28 - July 2021
ಬ್ರೇಕಿಂಗ್ ನ್ಯೂಸ್
Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ… ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2… ಉಡುಪಿಯ ಉಸ್ತುವಾರಿ ಮಂತ್ರಿ ಇನ್ನು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿ!: ವಲಸೆ ಬಂದು ಸಿಎಂ ಆದ 2ನೇ… BIG BREAKING | ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಆಯ್ಕೆ… ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ… ಬಿಜೆಪಿ ಶಾಸಕಾಂಗ ಪಕ್ಷ ಸಭೆ ಮುನ್ನ ಯಡಿಯೂರಪ್ಪರ ಭೇಟಿಯಾದ ಅರುಣ್ ಸಿಂಗ್, ನಳಿನ್… ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು…

ಇತ್ತೀಚಿನ ಸುದ್ದಿ

ಯಾರೂ ನನ್ನಲ್ಲಿ ರಾಜೀನಾಮೆ ಕೇಳೂ ಇಲ್ಲ, ತಾನು ಕೊಡುವುದೂ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ನುಡಿ

17/07/2021, 19:18

ಬೆಂಗಳೂರು(reporterkarnataka news): ಮುಂದಿನ ತಿಂಗಳ ಮೊದಲ ವಾರ ತಾನು ಮತ್ತೆ ದೆಹಲಿಗೆ ಭೇಟಿ ನೀಡಲಿದ್ದೇನೆ. ಇದೀಗ ತನ್ನಲ್ಲಿ ಯಾರೂ ರಾಜೀನಾಮೆ ಕೇಳಿಲ್ಲ. ತಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಅವರು ಶುಕ್ರವಾರ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದರು. ಜತೆಗೆ ಪುತ್ರ ಬಿ.ಎಸ್. ವಿಜಯೇಂದ್ರ ಕೂಡ ಇದ್ದರು. ಶುಕ್ರವಾರ ಸಂಜೆ ದೆಹಲಿಯ ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದ್ದರು. ಸುಮಾರು 10 ನಿಮಿಷ ಪ್ರಧಾನಿ ಜತೆ ಮಾತುಕತೆ ನಡೆಸಿದರು.

ನಂತರ ಮಾಧ್ಯಮ ಜತೆ ಮಾತನಾಡಿದ ಯಡಿಯೂರಪ್ಪ, ಮೇಕೆದಾಟು ಯೋಜನೆ ಸೇರಿದಂತೆ ರಾಜ್ಯದ ಹಲವು ಅಭಿವೃದ್ಧಿ ಕಾರ್ಯದ ಬಗ್ಗೆ ಪ್ರಧಾನಿ ಜತೆ ಚರ್ಚಿಸಿರುವುದಾಗಿ ಹೇಳಿದರು.

ಈ ಮಧ್ಯೆ ರಾಷ್ಟ್ರೀಯ ಮಾಧ್ಯಮಗಳಲ್ಲಿ ಯಡಿಯೂರಪ್ಪ ಅವರಿಂದ ಬಿಜೆಪಿ ಹೈಕಮಾಂಡ್ ರಾಜೀನಾಮೆ ಕೇಳಿದೆ ಎಂಬ ಸುದ್ದಿ ಬಿತ್ತರವಾಗಲು ಪ್ರಾರಂಭಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದರಲ್ಲಿ ಹುರುಳಿಲ್ಲ. ಯಾರೂ ನನ್ನಲ್ಲಿ ರಾಜೀನಾಮೆ ಕೇಳಿಲ್ಲ. ನಾನು ರಾಜೀನಾಮೆ ಕೊಡುವುದೂ ಇಲ್ಲ ಎಂದು ಖಡಾಖಂಡಿತವಾಗಿ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು