7:58 AM Sunday25 - July 2021
ಬ್ರೇಕಿಂಗ್ ನ್ಯೂಸ್
ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ : ಮೃತರ ಸಂಖ್ಯೆ ಏರಿಕೆ, ಹಲವು ಮಂದಿ ನಾಪತ್ತೆ ಕೇಂದ್ರ ಮಾಜಿ ಸಚಿವ ಆಸ್ಕರ್ ಆರೋಗ್ಯಕ್ಕೆ ಮಂಜುನಾಥ ಸ್ವಾಮಿ ಪ್ರಸಾದ; ಧರ್ಮಸ್ಥಳದಿಂದ ತಂದ ಡಾ.… ಗೃಹಿಣಿಯ ಜತೆ ಅನೈತಿಕ ಸಂಬಂಧ: ಹಾಡಹಗಲೇ ಯುವಕನ ಕೊಡಲಿಯಿಂದ ಕೊಚ್ಚಿ ಭೀಕರ ಕೊಲೆ ಕೊಯ್ನಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ: ಬೆಳಗಾವಿ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ… OLYMPICS | ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಮೀರಾಬಾಯಿ ಚಾನು Olympics | ಬಿಲ್ಲುಗಾರಿಕೆ ಮಿಶ್ರ ಡಬಲ್ಸ್‌ನಲ್ಲಿ ಕ್ವಾಟರ್‌ಫೈನಲ್‌ಗೆ ಲಗ್ಗೆ ಇಟ್ಟ ದೀಪಿಕಾ ಕುಮಾರಿ… ಬಂಡಿಪೋರಾದಲ್ಲಿ ಎನ್‌ಕೌಂಟರ್ : ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೈನಿಕರು Olympics | ಗೆಲುವಿನೊಂದಿಗೆ ಪಯಣ ಆರಂಭಿಸಿದ ಭಾರತೀಯ ಹಾಕಿ ತಂಡ : ಕೀವೀಸ್… ಗೆದ್ದು ಬಾ ಭಾರತ: ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಜಪಾನಿನ ಟೋಕಿಯೋದಲ್ಲಿ ವೈಭವದ ಚಾಲನೆ ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ಉಪ್ಪಿನಕೋಟೆ ವಿಶಾಲ ಗಾಣಿಗ ಬರ್ಬರ ಕೊಲೆ ಪ್ರಕರಣ: ಪತಿಯೇ ಹಂತಕನೇ? ಪೊಲೀಸ್ ತನಿಖೆ ಏನು ಹೇಳುತ್ತಿದೆ? 

20/07/2021, 08:07

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಗೃಹಿಣಿಯ ಕೊಲೆ ಪ್ರಕರಣದಲ್ಲಿ ಆಕೆಯ ಪತಿಯೇ ಭಾಗಿಯಾಗಿರುವ ಕುರಿತು ಪೊಲೀಸ್ ಇಲಾಖೆಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.

ವಿಶಾಲಾ ಅವರ ಪತಿ ರಾಮಕೃಷ್ಣ ಗಾಣಿಗ ಅವರು ದುಬೈನಲ್ಲಿದ್ದುಕೊಂಡೇ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದಾರೆ. ಬಾಡಿಗೆ ಹಂತಕರಿಗೆ ಸುಪಾರಿ ನೀಡಿ ಈ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ.

ಗುಜ್ಜಾಡಿ ನಾಯಕವಾಡಿಯ ನಿವಾಸಿ ವಾಸು ಗಾಣಿಗರ ಪುತ್ರಿ ವಿಶಾಲ ಗಾಣಿಗ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗೀಡಾಗಿದ್ದರು.

ಹೊರ ರಾಜ್ಯದಲ್ಲಿ ಅಡಗಿ ಕುಳಿತ್ತಿದ್ದ ಇಬ್ಬರು ಹಂತಕರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ತಂಡ ರಚಿಸಲಾಗಿತ್ತು. ರಾಮಕೃಷ್ಣ ಗಾಣಿಗನೇ ಕೊಲೆಗೆ ಸುಪಾರಿ ನೀಡಿರುವುದಾಗಿ ಹಂತಕರೇ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು