5:20 PM Sunday1 - August 2021
ಬ್ರೇಕಿಂಗ್ ನ್ಯೂಸ್
ಜಿಲ್ಲಾಧಿಕಾರಿಯರೇ, ತೈಲ ಬೆಲೆ ಏರಿದ್ದು ಬಸ್ ಮಾಲಿಕರಿಗೆ ಮಾತ್ರವಲ್ಲ: ಪ್ರಯಾಣ ದರ ಹೆಚ್ಚಳ… ಮೊಗ ತುಂಬಾ ಬರೇ ನಗು: ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಬೊಮ್ಮಾಯಿ; ಸಂಪುಟ ರಚನೆ… ಕೊರೊನಾ: ಕಾಸರಗೋಡಿಗೆ ಸರಕಾರಿ, ಖಾಸಗಿ ಬಸ್ ಸಂಚಾರವಿಲ್ಲ: ನಳಿನ್ ಕುಮಾರ್ ಕಟೀಲ್ ಕೋಲಾರ: ಜನತಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಮ ಸಂಧಾನ ಕಾರ್ಯಕ್ರಮ: ಆಗಸ್ಟ್ 14ರಂದು ಮೆಗಾ ಅದಾಲತ್ ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?:… ಕರ್ನಾಟಕದಲ್ಲಿ ನಿರೀಕ್ಷೆ ಇರದ ರಾಜಕಾರಣಿ ಯಾರಾದರೂ ಇದ್ದಾರ ? : ನನಗೂ ಮತ್ತೆ… Job Alert | ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದೀರ ? ಸಾರಿಗೆ ಇಲಾಖೆಯಲ್ಲಿ ಇದೆ… Job Alert : 10ನೇ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿದೆ ವಿವಿಧ ಹುದ್ದೆಗಳು:… “ಯಾನ್ ರೌಂಡ್ಸ್ ಪೋನಗ ನಿನ್ನ ಇಲ್ಲದಲ್ಪ ತಿಕ್ಕುವೆ ಓಕೆ ನಾ” ಎಂದ ಹೆಡ್‌ಕಾನ್ಸ್ಟೇಬಲ್… ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ ಸ್ವೀಕಾರ: ಜನತಾ ಪರಿವಾರದ ಮಾಜಿ…

ಇತ್ತೀಚಿನ ಸುದ್ದಿ

BSY Resignation | ಬಿಎಸ್‌ವೈ ರಾಜೀನಾಮೆ ಬಹುತೇಕ ಫಿಕ್ಸ್ : ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ‘ರಾಜಾಹುಲಿ’

22/07/2021, 12:46

ಬೆಂಗಳೂರು (ReporterKarnataka.com)

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್​ ಯಡಿಯೂರಪ್ಪ ಬದಲಾವಣೆ ಎನ್ನುವ ವಿಷಯ ಹೊರ ಬಿದ್ದ ಮೇಲೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವೆ ಸೃಷ್ಟಿಯಾಗಿದೆ. ಯಡಿಯೂರಪ್ಪ ಬದಲಾಗಬಾರದು ಅಂತ ಮಠಾಧೀಶರಿಂದ ಹಿಡಿದು, ಜನ ಸಾಮಾನ್ಯರವರೆಗೂ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಆದರೆ ಸ್ವತಃ ಸಿಎಂ ಯಡಿಯೂರಪ್ಪ ಪರೋಕ್ಷವಾಗಿ ಜುಲೈ 26 ರಂದು ರಾಜೀನಾಮೆ ನೀಸುವುದರ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಹೌದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್​ವೈ, ಜುಲೈ 25ರಂದು ವರಿಷ್ಠರ ಸೂಚನೆ ಬರುತ್ತೆ, ಜುಲೈ 26ರಿಂದ ಹೈಕಮಾಂಡ್​ ಸೂಚನೆಯಂತೆ ನಡೆಯುವೆ, ಹೈಕಮಾಂಡ್​ ನಿರ್ಧಾರಕ್ಕೆ ನಾನು ಬದ್ಧನಾಗಿರುವೆ, ಹೈಕಮಾಂಡ್​ ತೀರ್ಮಾನವೇ ನನ್ನ ತೀರ್ಮಾನ, ನಮ್ಮ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅವಕಾಶ ಕೊಟ್ಟಿಲ್ಲ, ಆದರೂ ನನಗೆ ವರಿಷ್ಠರು ಅವಕಾಶ ನೀಡಿದ್ದರು. ಅವರು ಕೊಟ್ಟ ಅವಕಾಶವನ್ನು ಸಮರ್ಥವಾಗಿ ಬಳಸಿದ್ದೇನೆ, ಪಕ್ಷ ಮತ್ತು ನಾಡಿನ ಜನರ ಹಿತಕ್ಕಾಗಿ ದುಡಿದಿದ್ದೇನೆ, ನನ್ನ ಪರ ಯಾರೂ ಪ್ರತಿಭಟನೆ, ಹೋರಾಟ ಮಾಡ್ಬೇಡಿ ಎಂದು ರಾಜೀನಾಮೆ ಬಗ್ಗೆ ರಾಜ್ಯದ ಜನರಿಗೆ ಸೂಚನೆಯನ್ನೂ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು