5:05 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಬಿಜೆಪಿ ಹೈಕಮಾಂಡ್ ನಿಂದಲೇ ಆಪರೇಶನ್: ವಿರೋಧಿಸದೆ ಯಡಿಯೂರಪ್ಪ ರಾಜೀನಾಮೆ ನೀಡಿದ್ದೇಕೆ? 

26/07/2021, 22:11

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ದಕ್ಷಿಣ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಿ.ಎಸ್. ಯಡಿಯೂರಪ್ಪ ಅವರು ಅವಧಿಗೆ ಮುನ್ನವೇ ರಾಜೀನಾಮೆ ನೀಡಿದ್ದಾರೆ. ಆಪರೇಶನ್ ಕಮಲದ ಮೂಲಕ ಕಮಲವನ್ನು ಅರಳಿಸಿದ ಯಡಿಯೂರಪ್ಪ ಅವರು ಸ್ವತಃ ತಾನೇ ಪಕ್ಷದಲ್ಲಿ ಆಪರೇಶನ್ ಗೊಳಗಾಗಿ ಈಗ ಇತಿಹಾಸ ಸೃಷ್ಟಿಸಿದ್ದಾರೆ.

ಯಡಿಯೂರಪ್ಪ ಅವರು 17 ಮಂದಿ ಶಾಸಕರನ್ನು ಬೇರೆ ಪಕ್ಷದಿಂದ ಕಮಲ ಪಾಳಯಕ್ಕೆ ಸೇರಿಸಿಕೊಳ್ಳದಿದ್ದರೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತಿರಲಿಲ್ಲ. 17 ಶಾಸಕರನ್ನು ಕರೆದು ತರುವಾಗ ನೀವೇ ಮುಂದಿನ ಅವಧಿ ಮುಗಿಯುವ ವರೆಗೆ ಮುಖ್ಯಮಂತ್ರಿ ಎಂಬ ಭರವಸೆಯನ್ನು ಕೂಡ ಬಿಜೆಪಿ ವರಿಷ್ಠರು ನೀಡಿದ್ದರು ಎನ್ನಲಾಗಿದೆ. ಆದರೆ ಮುಖ್ಯಮಂತ್ರಿ ಕುಟುಂಬದ ಮೇಲಿನ ಭ್ರಷ್ಟಾಚಾರ ಆರೋಪ ಯಡಿಯೂರಪ್ಪ ಅವರನ್ನು ಸುಲಭದಲ್ಲಿ ಅಧಿಕಾರದಿಂದ ಕೆಳಗಿಳಿಸಲು ಸಹಕಾರಿಯಾಯಿತು. ಒಂದು ರೀತಿಯಲ್ಲಿ ಇದು ಪದಚ್ಯುತಿಯೇ ಸರಿ. ಹಾಗೆಂತ ಯಡಿಯೂರಪ್ಪ ಇಲ್ಲದಿದ್ದರೆ ಈ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಧ್ಯವಾಗುತ್ತಿರಲಿಲ್ಲ ಎನ್ನುವುದು ಕೂಡ ಅಷ್ಟೇ ಸತ್ಯ. ಇದೀಗ ಪಕ್ಷ ಅಧಿಕಾರಕ್ಕೆ ಬಂದಾಗಿದೆ. ಯಡಿಯೂರಪ್ಪ ಅವರ ಕುಟುಂಬದ ಮೇಲೆ ಸಾಕಷ್ಟು ಭ್ರಷ್ಟಾಚಾರ ಆರೋಪವಿದೆ. ಪುತ್ರ ವಿಜಯೇಂದ್ರ ಅಧಿಕಾರದಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ದಿನ ಬೆಳಗಾದರೆ ಬಿಜೆಪಿ ವರಿಷ್ಠರಿಗೆ ದೂರು ಹೋಗುತ್ತಿತ್ತು. ಸಂಪುಟದಲ್ಲಿದ್ದ ಸಚಿವರುಗಳೇ ಯಡಿಯೂರಪ್ಪ ವಿರುದ್ಧ ದೆಹಲಿಗೆ ಯಾತ್ರೆ ಮಾಡುತ್ತಿದ್ದರು. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ಪಕ್ಷದ ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯಂತು ಅಧಿಕಾರದಲ್ಲಿದೆ ಇನ್ಯಾಕೆ ಯಡಿಯೂರಪ್ಪ ಅವರ ಹಂಗು ಎನ್ನುವಂತೆ ಬಿಜೆಪಿ ವರಿಷ್ಠರು ನಡೆದುಕೊಂಡಿರುವುದು ಸ್ಪಷ್ಟವಾಗಿದೆ.

ಯಡಿಯೂರಪ್ಪ ಅವರು ಮಠಾಧೀಶರನ್ನು ಒಗ್ಗೂಡಿಸುವಾಗ ಅವರು ಅಷ್ಟು ಸುಲಭದಲ್ಲಿ ಅಧಿಕಾರ ಬಿಟ್ಟು ಕೊಡುವುದಿಲ್ಲ ಎಂದು ಜನರು ಭಾವಿಸಿದ್ದರು. ಕಳೆದ ಬಾರಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದಾಗ ಬಂಡಾಯವೆದ್ದು ಕೆಜೆಪಿ ಕಟ್ಟಿದ್ದರು. ಕೆಜೆಪಿ ರಾಜ್ಯದಲ್ಲಿ ಬರೇ 6 ಸ್ಥಾನಗಳನ್ನು ಗಳಿಸಿದರೂ ಮಿಕ್ಕ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗಿತ್ತು. 2013ರ ಚುನಾವಣೆಯಲ್ಲಿ ಬಿಜೆಪಿ ಕೇವಲ 35 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇದರಿಂದ ಯಡಿಯೂರಪ್ಪ ಇಲ್ಲದಿದ್ದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಅಷ್ಟು ಸುಲಭವಲ್ಲ ಎನ್ನುವುದು ಪಕ್ಷದ ನಾಯಕರಿಗೆ ಅರ್ಥವಾಗಿತ್ತು. ಆದರೆ ಬಿಜೆಪಿ ವರಿಷ್ಠರು ಹಠಕ್ಕೆ ಬಿದ್ದಂತೆ ಮುಖ್ಯಮಂತ್ರಿ ಬದಲಾಯಿಸಲು ಯಡಿಯೂರಪ್ಪ ಅವರ ರಾಜೀನಾಮೆ ಪಡೆದುಕೊಂಡಿದ್ದಾರೆ.

ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ, ಈ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್ ಸಂಸ್ಕೃತಿ ಒಂದು ರೀತಿಯಲ್ಲಿ ಹೇರುವ ಕ್ರಮವಾಗಿದೆ. ಕರ್ನಾಟಕದ ನಾಯಕನನ್ನು ಕರ್ನಾಟಕದಲ್ಲಿ ಆಯ್ಕೆ ಮಾಡಬೇಕೇ ಹೊರತು ದೆಹಲಿಯಲ್ಲಿ ಅಲ್ಲ. ನಮ್ಮಶಾಸಕರೇ ಆಯ್ಕೆ ಮಾಡಬೇಕು ಹೊರತು ದೆಹಲಿಯಲ್ಲಿ ಸಂಸದರಲ್ಲ. ಆದರೆ ಹೈಕಮಾಂಡ್ ಸಂಸ್ಕೃತಿಯಲ್ಲಿ ಹೈಕಮಾಂಡ್ ಹೇಳಿದಾಗೆ ಕೇಳಬೇಕು. ಹೈಕಮಾಂಡ್ ತಾಳಕ್ಕೆ ಸರಿಯಾಗಿ ಕುಣಿಯಬೇಕು. ಆದರೆ ಯಡಿಯೂರಪ್ಪ ಅವರು ಹೈಕಮಾಂಡ್ ತಾಳಕ್ಕೆ ತಕ್ಕ ಕುಣಿಯುವ ಜಾಯಮಾನದವರಲ್ಲ. ಆದರೂ ಈ ಬಾರಿ ಹೈಕಮಾಂಡ್ ಆಣತಿಯಂತೆ ರಾಜೀನಾಮೆ ನೀಡಿದ್ದಾರೆ. 

ಹೌದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ಸಾಕಷ್ಟು ಭ್ರಷ್ಟಾಚಾರ ಆರೋಪವಿದೆ. ಕೊಸರಾಡಿ ಬಿಜೆಪಿಯಿಂದ ಹೊರ ಹೋದರೆ ಕಷ್ಟದ ಹಾದಿ. ಇದು ಯಡಿಯೂರಪ್ಪ ಅವರಿಗೂ ಗೊತ್ತು. ಇದೇ ಕಾರಣಕ್ಕೆ ಎರಡು ಹನಿ ಕಣ್ಣೀರು ಸುರಿಸಿ ಮೌನವಾಗಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು